ಬೆಂಗಳೂರು: ‘ಉಪಕುಲಪತಿ ಹುದ್ದೆಗೆ ಲಂಚ ನೀಡಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರು ಬಹಳ ಅನುಭವ ಹೊಂದಿರುವ ವಿದ್ಯಾವಂತರು. ಉಪಕುಲಪತಿಗಳ ಹುದ್ದೆಗೆ 5 ಕೋಟಿ ರು. ನೀಡಬೇಕು ಎಂದು ಈ ಸಂಸದರು ಹೇಳಿದ್ದಾರೆ. ಇಡಿ, ಐಟಿ, ಸಿಬಿಐ, ಲೋಕಾಯುಕ್ತ ಸಂಸ್ಥೆಗಳು ಏನು ಮಾಡುತ್ತಿವೆ. ಈ ಸಂದರ್ಭದಲ್ಲಿ ರಾಜ್ಯಪಾಲರು ಹಾಗೂ ಅವರ ಕಚೇರಿ ಮೇಲೆ ಆರೋಪ ಮಾಡಲು ಆಗುವುದಿಲ್ಲ. ಅದು ಸರಿಯಲ್ಲ. ಉಪಕುಲಪತಿಗಳ ಹೆಸರನ್ನು ಸರ್ಕಾರ ಶಿಫಾರಸ್ಸು ಮಾಡಿದರೆ ರಾಜ್ಯಪಾಲರು ನೇಮಕ ಮಾಡುತ್ತಾರೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದಿದ್ದಾರೆ.
BIG NEWS: ಭಾರತದ ಪಿತಾಮಹ ಪ್ರಧಾನಿ ಮೋದಿ: ಅಮೃತಾ ಫಡ್ನವೀಸ್ | India has two ‘rashtra pita’
ಈ ಕುರಿತಂತೆ ಬಿಜೆಪಿ ಸಂಸದ ಪ್ರತಾಪಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿರುವಂತ ಅವರು, ಸರ್ಕಾರದಲ್ಲಿ ಯಾರಿಗೆ ಈ ಹಣ ತಲುಪಿದೆ? ಮಂತ್ರಿಗಳಿಗೆ ತಲುಪಿದೆಯೋ? ಅಧಿಕಾರಿಗಳಿಗೆ ತಲುಪಿದೆಯೋ? ಎಂಬುದು ಚರ್ಚೆ ಆಗಬೇಕು. ಅದಕ್ಕಾಗಿ ವಿಧಾನ ಪರಿಷತ್ ನಲ್ಲಿ ಈ ವಿಚಾರ ಪ್ರಸ್ತಾಪ ಮಾಡಲಾಗಿದೆ. ಕೂಡಲೇ ಲೋಕಾಯುಕ್ತ, ಇಡಿ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು. ನಮ್ಮ ಮೇಲೆ ದಾಳಿ ಮಾಡಿ ತನಿಖೆ ಮಾಡುವವರು ಇವರ ಹೇಳಿಕೆ ವಿಚಾರದಲ್ಲೂ ತನಿಖೆ ಮಾಡಬೇಕು. ಸಿಬಿಐನವರು ನನ್ನ ಜತೆ ವ್ಯವಹಾರ ಇಟ್ಟುಕೊಂಡವರಿಗೆಲ್ಲ ನೊಟೀಸ್ ನೀಡಿ ವಿಚಾರಣೆ ಮಾಡಿದ್ದಾರೆ. ಹೀಗಾಗಿ ಈ ವಿಚಾರದಲ್ಲಿ ನಾಳೆ ಚರ್ಚೆ ಆಗಬೇಕು ಎಂದು ಕಾಂಗ್ರೆಸ್ ಆಗ್ರಹಿದ್ದಾರೆ.
ಶಿಕ್ಷಣ ವ್ಯವಸ್ಥೆಯ ಹುದ್ದೆ ಮಾರಾಟ ಭ್ರಷ್ಟಾಚಾರದ ವಿಚಾರವಾಗಿದ್ದು, ಬಿಜೆಪಿ ಸಂಸದರು ಹೇಳಿರುವ ವಿಚಾರವನ್ನು ನಾವು ಚರ್ಚೆ ಮಾಡದಿದ್ದರೆ ನಮ್ಮ ಕರ್ತವ್ಯದಲ್ಲಿ ಲೋಪ ಆಗಲಿದೆ. ಹೀಗಾಗಿ ಈ ವಿಚಾರ ತನಿಖೆ ಆಗಬೇಕು, ಜನರಿಗೆ ವಿಚಾರ ತಿಳಿಯಬೇಕು ಎಂದು ಹೇಳಿದ್ದಾರೆ.