ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ, ಆಗಸ್ಟ್.19ರಂದು ಜಿಲ್ಲಾ ಡಿಸಿಸಿ ಕೇಂದ್ರಗಳ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಈ ಕುರಿತಂತೆ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಪತ್ರವನ್ನು ಬರೆದಿರುವಂತ ಅವರು, ಕರ್ನಾಟಕದ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುತ್ತಾರೆ. ರಾಜ್ಯಪಾಲರ ಈ ಪಕ್ಷಪಾತಿ ನಡೆಯನ್ನು ಖಂಡಿಸಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಜಿಲ್ಲಾ ಕೇಂದ್ರಗಳಲ್ಲಿ ದಿನಾಂಕ 19-08-2024 ಬೆಳಿಗ್ಗೆ 11-00 ಗಂಟೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕು ಹಾಗೂ ರಾಜ್ಯಪಾಲರ ಅಸಂವಿಧಾನಿಕ ನಡೆಯನ್ನು ಖಂಡಿಸಿ ರಾಷ್ಟ್ರಪತಿಗಳಿಗೆ ನೇರವಾಗಿ ಈಮೈಲ್ ಮೂಲಕ (presidentofindia@rb.nic.in) ಹಾಗೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಮೂಲಕ ಜ್ಞಾಪನಾ ಪತ್ರವನ್ನು (Memorandum) ನೀಡಬೇಕು. ಈ ಪ್ರತಿಭಟನೆ ನಡೆಯುವ ಸ್ಥಳಕ್ಕೆ ಕನಿಷ್ಠ ಅರ್ಧ ಕಿಲೋಮೀಟರ್ ಪಾದಯಾತ್ರೆ ಮೂಲಕ ಹೋಗಿ ಪ್ರತಿಭಟನೆ ಆರಂಭಿಸಬೇಕು. ಈ ಪ್ರತಿಭಟನೆಯ ವರದಿಯನ್ನು ಫೋಟೋ ಹಾಗೂ ವಿಡೀಯೋ ಸಮೇತ ಕೆಪಿಸಿಸಿಗೆ ಸಲ್ಲಿಸುವುದು ಎಂದು ಹೇಳಿದ್ದಾರೆ.
ಈ ಪ್ರತಿಭಟನೆಯಲ್ಲಿ ಎಲ್ಲಾ ಸಂಬಂಧಪಟ್ಟ ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, 2024ರ ಲೋಕಸಭೆ ಅಭ್ಯರ್ಥಿಗಳು, ಕೆಪಿಸಿಸಿ ಪದಾಧಿಕಾರಿಗಳು, 2023ರ ವಿಧಾನಸಭೆ ಅಭ್ಯರ್ಥಿಗಳು, ಕೆಪಿಸಿಸಿ ಸದಸ್ಯರು, ಡಿಸಿಸಿ/ಬಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕ/ಸೆಲ್/ವಿಭಾಗಗಳ ಅಧ್ಯಕ್ಷರು/ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಸದಸ್ಯರು, ವಾರ್ಡ್, ಪಂಚಾಯಿತಿ ಹಾಗೂ ಬೂತ್ ಮಟ್ಟದ ಕಾರ್ಯಕರ್ತರುಗಳು ಹಾಗೂ ಇತರ ಎಲ್ಲ ಸ್ಥಳೀಯ ಮುಖಂಡರುಗಳು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕಾಗಿ ಕೋರಿದ್ದಾರೆ.
ಆಸ್ಪತ್ರೆಗಳಲ್ಲಿನ ಸುರಕ್ಷತಾ ಮಾನದಂಡಗಳ ಬಗ್ಗೆ ಚರ್ಚಿಸಲು ಸಂಘಗಳೊಂದಿಗೆ ಸಭೆ ಕರೆದ ‘ರಾಜ್ಯ ಸರ್ಕಾರ’
BREAKING : ಪ್ರಾಸಿಕ್ಯೂಷನ್ ಗೆ ಅನುಮತಿ : `CM ಸಿದ್ದರಾಮಯ್ಯ’ ಬೆನ್ನಿಗೆ ನಿಂತ ಕುರುಬ ಸಮುದಾಯ