ಚಾಮರಾಜನಗರ: ಗುಂಡ್ಲುಪೇಟೆಯಲ್ಲಿ ಭಾರತ್ ಜೋಡೋ ಪಾದಯಾತ್ರೆ ಪ್ಲೆಕ್ಸ್ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ದುಷ್ಕೃತ್ಯ ನಡೆಸಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಯವಂತೆ ಡಿಕೆಶಿ ಆಗ್ರಹಿಸಿದ್ದಾರೆ.
ಕೂಡಲೇ ಪ್ಲೆಕ್ಸ್ ಹರಿದ ಕಿಡಿಗೇಡಿಗಳನ್ನ ಬಂಧಿಸಬೇಕು. ಒಂದು ವೇಳೆ ಬಂಧಿಸದೆ ಹೋದ್ರೆ ನಮ್ಮ ರಾಜಕಾರಣ ನಾವೂ ಮಾಡ್ತಿವಿ ಅವರ ರಾಜಕಾರಣ ಏನಿದೆ ಅದನ್ನು ಮಾಡಲಿ. ಈ ಹೇಡಿತನ ನಾವು ಮಾಡಿಲ್ಲ. ಇದೀಗ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ.
ಇನ್ನು ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಸೆ.30 ರಂದು ಗುಂಡ್ಲುಪೇಟೆ ಮೂಲಕ ರಾಜ್ಯ ಪ್ರವೇಶಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಹಾಕಲಾಗಿದ್ದ ನಾಯಕರ ಫ್ಲೆಕ್ಸ್ಗಳನ್ನು ಇಂದು ಬೆಳಗಿನಜಾವ ದುಷ್ಕರ್ಮಿಗಳು ಹರಿದುಹಾಕಿದ್ದಾರೆ.
ಗುಂಡ್ಲುಪೇಟೆ ಪಟ್ಟಣದಲ್ಲಿ ಸುರಭಿ ಹೋಟೆಲ್ನಿಂದ ಊಟಿ ರಸ್ತೆಯ ಉದ್ದಕ್ಕೂ ಅಳವಡಿಸಿದ್ದ ಫ್ಲೆಕ್ಸ್ಗಳಿಗೆ ಕಿಡಿಗೇಡಿಗಳು ಬ್ಲೇಡ್ ಹೊಡೆದಿದ್ದಾರೆ. ಎಐಸಿಸಿ ನಾಯಕ ರಾಹುಲ್ ಗಾಂಧಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಚಾಮರಾಜನಗರ ಶಾಸಕ ಸಿ ಪುಟ್ಟರಂಗಶೆಟ್ಟಿ ಭಾವಚಿತ್ರಗಳಿರುವ ಫ್ಲೆಕ್ಸ್ ಅನ್ನು ಹರಿದು ಹಾಕಲಾಗಿದೆ.