ಬೆಂಗಳೂರು: ಇಂದು ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಇದೀಗ ಡಿ.ಕೆ.ಶಿವಕುಮಾರ್ ಅವರ ಎದುರು ಯಾರಾದರೂ ನಾಮಪತ್ರ ಸಲ್ಲಿಸಿದರೆ ಮಾತ್ರ ಚುನಾವಣೆ ಪ್ರಕ್ರಿಯೆಗಳು ನಡೆಯಲಿವೆ. ಇಲ್ಲವೆಂದರೆ ಎರಡನೇ ಅವಧಿಗೆ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯುವುದು ಬಹುತೇಕ ಖಚಿತವಾಗಿದೆ.
BIGG NEWS: ಬೆಂಗಳೂರಿನಲ್ಲಿ ಸಿವಿಲ್ ವರ್ಕ್ಗೆ ಇನ್ಮುಂದೆ ಕ್ವಾಲಿಟಿ ಚೆಕ್ ಕಡ್ಡಾಯ: ಬಿಬಿಎಂಪಿ ಆದೇಶ
ನಗರದ ಅಂಬೇಡ್ಕರ್ ಭವನದಲ್ಲಿ ಎಐಸಿಸಿ ವರಿಷ್ಠ ಹಾಗೂ ಸದಸ್ಯತ್ವ ನೊಂದಣಿ ಉಸ್ತುವಾರಿ ಸುದರ್ಶನ ನಾಚಿಯಪ್ಪನ್ ಸಮ್ಮುಖದಲ್ಲಿ ಆಂತರಿಕ ಚುನಾವಣೆ ನಡೆಯಲಿದೆ.ಮೂರು ವರ್ಷಕ್ಕೊಮ್ಮೆ ಕೆಪಿಸಿಸಿ ಅಧ್ಯಕ್ಷ ಚುನಾವಣೆ ನಡೆಸಬೇಕಿತ್ತು. ನೂತನ ಕೆಪಿಸಿಸಿ ಪದಾಧಿಕಾರಿಗಳು ಆಯ್ಕೆಯಾದಾಗ ಸಂಪ್ರದಾಯದಂತೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮಾಡಬೇಕಿದೆ. ಆದರೆ ದಿನೇಶ್ ಗುಂಡೂರಾವ್ ರಾಜಿನಾಮೆ ಬಳಿಕ ಪದಾಧಿಕಾರಿಗಳ ಆಯ್ಕೆ ಮೂಲೆ ಗುಂಪಾಗಿತ್ತು. ಡಿಕೆಶಿ ಅಧ್ಯಕ್ಷರಾದ ಬಳಿಕ ಸದಸ್ಯತ್ವ ನೊಂದಣಿಗೆ ಚಾಲನೆ ಸಿಕ್ಕಿದೆ.
BIGG NEWS: ಬೆಂಗಳೂರಿನಲ್ಲಿ ಸಿವಿಲ್ ವರ್ಕ್ಗೆ ಇನ್ಮುಂದೆ ಕ್ವಾಲಿಟಿ ಚೆಕ್ ಕಡ್ಡಾಯ: ಬಿಬಿಎಂಪಿ ಆದೇಶ
ಇನ್ನು ವರಿಷ್ಠರ ತೀರ್ಮಾನದ ಪ್ರಕಾರ ಡಿಕೆಶಿ ಇನ್ನೊಂದು ವರ್ಷ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ. ಎಐಸಿಸಿ ಸೂಚನೆ ಮೇರೆಗೆ ಒಂದು ಸಾಲಿನ ನಿರ್ಣಯ ತೆಗೆದುಕೊಂಡು ಡಿಕೆಶಿ ಅವರನ್ನು ಅಧ್ಯಕ್ಷರನ್ನಾಗಿ ಮುಂದುವರೆಸುವ ಸಾಧ್ಯತೆಯಿದೆ.