ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಯವರ ( KPCC Working President Eshwar Khandre ) ಟ್ವಿಟ್ಟರ್ ಖಾತೆ ಹ್ಯಾಕ್ ಆಗಿರೋದಾಗಿ ತಿಳಿದು ಬಂದಿದೆ. ಅಲ್ಲದೇ ಅವರ ಟ್ವಿಟ್ಟರ್ ಖಾತೆಯಿಂದ ( Twitter Account ) ಕೆಲ ಸಂದೇಶಗಳನ್ನು ಕಳುಹಿಸಲಾಗಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಟ್ವಿಟ್ ನಲ್ಲಿ ಮಾಹಿತಿ ನೀಡಿರುವಂತ ಅವರು, ನನ್ನ ಟ್ವಿಟ್ಟರ್ ಖಾತೆಯನ್ನು ಕೆಲ ಕಿಡಿಗೇಡಿಗಳಿಂದ ಹ್ಯಾಕ್ ಮಾಡಲಾಗಿತ್ತು. ಕೆಲ ತಪ್ಪುಗಳು ನಡೆದಿವೆ. ಇದರ ವಿರುದ್ಧ ಸೈಬರ್ ಕ್ರೈಂನಲ್ಲಿ ದೂರು ನೀಡಿರುವುದಾಗಿ ತಿಳಿಸಿದ್ದಾರೆ.
ನನ್ನ ಟ್ವಿಟರ್ ಖಾತೆ ಕೆಲ ಕಿಡಿಗೇಡಿಗಳಿಂದ ಹ್ಯಾಕ್ ಆಗಿದ್ದು ಕೆಲ ತಪ್ಪುಗಳು ನಡೆದಿವೆ ಇದರ ವಿರುದ್ಧ ಸೈಬರ್ ಕ್ರೈಂ ನಲ್ಲಿ ದೂರು ನೀಡಲಾಗಿದೆ.@Twitter @tv9kannada @INCKarnataka
— Eshwar Khandre (@eshwar_khandre) December 8, 2022
ಬೆಳಗಾವಿ ಗಡಿ ವಿವಾದ : ಕರ್ನಾಟಕದಲ್ಲೂ ‘ಸಂಪೂರ್ಣ ಬಂದೋಬಸ್ತ್’ ಎಂದ ಸಿಎಂ ಬೊಮ್ಮಾಯಿ
ಬೆಂಗಳೂರು : ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿಯೂ ಸಂಪೂರ್ಣ ಬಂದೋಬಸ್ತ್ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಳಗಾವಿ ಗಡಿ ವಿವಾದದ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಮಹಾರಾಷ್ಟ್ರ ಸರ್ಕಾರದ ಜೊತೆ ಚರ್ಚಿಸಿದ್ದೇನೆ ವಿವಾದ ಸಂಬಂಧ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ , ಕರ್ನಾಟಕದಲ್ಲಿಯೂ ಸಂಪೂರ್ಣ ಬಂದೋಬಸ್ತ್ ಎಂದರು.
ನಿಮ್ಮ ಭಾಗದಲ್ಲಿ ಶಾಂತಿ ಸೌಹಾರ್ದತೆಯನ್ನು ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ಕಾಪಾಡಿಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಆ ಕಡೆಯಿಂದ ಪ್ರಚೋದನೆಯಾಗಕೂಡದು ಎಂದು ಆಗ್ರಹಿಸಲಾಗಿದೆ ಎಂದರು., ಮಹಾರಾಷ್ಟ್ರ ಡಿಜಿಪಿ ಹಾಗೂ ಬೆಳಗಾವಿ ಜಿಲ್ಲೆಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆ ಕೂಡ ಚರ್ಚೆ ನಡೆದಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಬೆಳಗಾವಿ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ಕುರಿತು ಮಹಾರಾಷ್ಟ್ರ ಸರ್ಕಾರದ ಜೊತೆ ಚರ್ಚಿಸಿದ್ದೇನೆ , ಯಾರಿಗೂ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ಬೊಮ್ಮಾಯಿ ಹೇಳಿದರು. ನಾನೂ ಕೂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡಿದ್ದು, ಕನ್ನಡ ನಾಡಿನ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಎರಡೂ ಕಡೆ ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಹೇಳಿದ್ದಾರೆ ಎಂದರು.
ಗಡಿ ವಿವಾದದ ಕುರಿತು ಸಿಎಂಗೆ ಕರವೇ ಪತ್ರ
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಕುರಿತು ಕರವೇ ನಾರಾಯಣ ಗೌಡ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದು, ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಾವು ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ವಿನಾಕಾರಣ ದೌರ್ಜನ್ಯವೆಸಗಲಾಗುತ್ತಿದೆ. ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿಗಳಾಗುತ್ತಿವೆ. ವಿಧ್ವಂಸಕ ಕೃತ್ಯಗಳನ್ನು ಎಸಗಲಾಗುತ್ತಿದೆ. ಕನ್ನಡಿಗರ ಮೇಲಿನ ದಾಳಿ-ದೌರ್ಜನ್ಯಗಳು ಭಯೋತ್ಪಾದನೆಗೆ ಸಮನಾದ ಹೇಯಕೃತ್ಯಗಳಾಗಿರುತ್ತವೆ. ಇದನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತದೆ, ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಾವು ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತೆ ಎಂದು ಕರವೇ ನಾರಾಯಣ ಗೌಡ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ .