ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮದ 622 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ.
ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) 622 ಹುದ್ದೆಗಳ ನೇಮಕಾತಿಗೆ ಇದೇ ಫೆಬ್ರವರಿ 18ರಂದು ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ. ಅಂತಿಮ ಅಂಕಪಟ್ಟಿಯನ್ನು ಕೆಪಿಸಿಎಲ್ ಸಂಸ್ಥೆಗೆ ಹಸ್ತಾಂತರಿಸಲಾಗುವುದು. ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಲು ಕೆಪಿಸಿಎಲ್ ಕ್ರಮ ವಹಿಸಲಿದೆ.