*ಅವಿನಾಶ್ ಆರ್ ಭೀಮಸಂದ್ರ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ (ಕೆಪಿಎಸ್‌ಸಿ) 2023-245 ಸಾಲಿನ `ಗೆಜೆಟೆಡ್ ಪ್ರೊಬೇಷನರಿ’ 384 (ಕೆಎಎಸ್) ಹುದ್ದೆಗಳಿಗೆ ಆಯೋಗ ಅಧಿಸೂಚನೆ ಹೊರಡಿಸಿದೆ. ಮಾರ್ಚ್ 4 ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಪ್ರಕ್ರಿಯೆ ಪ್ರಾರಂಭವಾಗಲಿದೆ.
BREAKING: ಗಗನಯಾನಕ್ಕೆ ನಾಲ್ವರು ಗಗನಯಾತ್ರಿಗಳ ಹೆಸರು ಬಹಿರಂಗಪಡಿಸಿದ ಪ್ರಧಾನಿ ಮೋದಿ!
ಏಪ್ರಿಲ್ 3 ರಂದು ಅರ್ಜಿ ಸಲ್ಲಿಕೆ ಕೊನೆ ದಿನವಾಗಿದೆ. ಅರ್ಜಿ ಸಲ್ಲಿಸಲು ಶುಲ್ಕ ಸಾಮಾನ್ಯ ವರ್ಗದವರಿಗೆ 600 ರೂ.: ಪ್ರವರ್ಗ 2ಎ, 2ಬಿ, 3ಎ, 3ಬಿಗಳಿಗೆ 300 ರೂ.; ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ.; ಎಸ್ಸಿ, ಎಸ್ಟಿ, ಪ್ರವರ್ಗ-1, ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಮೇ 5 ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ (ಹೈ.ಕ) ಸೇರಿದಂತೆ ಒಟ್ಟು 384 ಹುದ್ದೆಗಳಲ್ಲಿ ಗ್ರೂಪ್-ಎ’ 159, ಗ್ರೂಪ್-‘ಬಿ’ 225 ಹುದ್ದೆಗಳಿವೆ. ಕಲ್ಯಾಣ ಕರ್ನಾಟಕ ವೃಂದದ ಒಟ್ಟು 77 ಹುದ್ದೆಗಳಿವೆ. ಪದವಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಕನಿಷ್ಠ 21 ವರ್ಷ ವಯಸ್ಸು ಮೀರಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ 38: ಪ್ರವರ್ಗ 2ಎ, 2ಬಿ, 3ಎ, 3ಬಿಗಳಿಗೆ 41 ವರ್ಷ ಹಾಗೂ ಎಸ್ಸಿ- ಎಸ್ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 43 ವರ್ಷ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ kpsc.kar.nic.in ಭೇಟಿ ನೀಡಬಹುದಾಗಿದೆ.
WATCH VIDEO: ಸಾಮಾನ್ಯರಂತೆ ‘ಪುಸ್ತಕ’ ಕೊಳ್ಳುತ್ತಿರುವ ಬ್ರಿಟನ್‌ನ ಪ್ರಥಮ ಮಹಿಳೆ ‘ಅಕ್ಷತಾ ಮೂರ್ತಿ’! ವಿಡಿಯೋ ವೈರಲ್
ರಾಜ್ಯ ಸರ್ಕಾರದಿಂದ ʻಯುವನಿಧಿʼ ಯೋಜನೆ ಫಲಾನುಭವಿಗಳಿಗೆ ಮಹತ್ವದ ಮಾಹಿತಿ : ಕೂಡಲೇ ಈ ಕೆಲಸ ಮಾಡುವಂತೆ ಸೂಚನೆ!
ಅದೇ ರೀತಿ ‘KEA’ ಯಿಂದ 2500 ‘BMTC’ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಅದರ ವಿವರ ಕೂಡ ಈ ಕೆಳಕಂಡತಿದೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ (ದರ್ಜೆ-3 ಮೇಲ್ವಿಚಾರಕೇತರ) ಹುದ್ದೆಗಳನ್ನು ಸಂಸ್ಥೆಯ (ಪದವೃಂದ ಮತ್ತು ನೇಮಕಾತಿ) ನಿಯಮಾವಳಿಗಳು 1982 ಮತ್ತು ತದನಂತರ ಹೊರಡಿಸಲಾಗಿರುವ ತಿದ್ದುಪಡಿಗಳ ಅನುಸಾರ “ಮಿಕ್ಕುಳಿದ ಹಾಗೂ “ಸ್ಥಳೀಯ” ಈ ಎರಡೂ ವೃಂದಗಳಿಗೆ ಪ್ರತ್ಯೇಕವಾಗಿ ಮೀನಅರುವ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ (ON-LINE) ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಪಿ.ಯು.ಸಿ (ಆರ್ಟ್ಸ್/ ಕಾಮರ್ಸ್ / ಸೈನ್ಸ್)ನಲ್ಲಿ ಉತ್ತೀರ್ಣರಾಗಿರತಕ್ಕದ್ದು, ಅಥವಾ 10+2 ಐ.ಸಿ.ಎಸ್.ಇ. (ICSE)/ ಸಿ.ಬಿ.ಎಸ್.ಇ (CBSE)ರಲ್ಲಿ ಉತ್ತೀರ್ಣರಾಗಿರತಕ್ಕದ್ದು, ಅಥವಾ ತತ್ಸಮಾನ ವಿದ್ಯಾರ್ಹತೆ ಅಂದರೆ, ತಾಂತ್ರಿಕ ಶಿಕ್ಷಣ ಇಲಾಖೆಯಿಂದ 03 ವರ್ಷಗಳ ಡಿಪ್ಲೋಮಾದಲ್ಲಿ] ಉತ್ತೀರ್ಣರಾಗಿರತಕ್ಕದ್ದು. (ಮುಕ್ತ ಶಾಲೆ ಅಥವಾ ಮುಕ್ತ ವಿಶ್ವವಿದ್ಯಾಲಯದಿಂದ ಪಡೆದ ಪಿ.ಯು.ಸಿ/12ನೇ ತರಗತಿಯನ್ನು ಅಥವಾ ಜೆ.ಒ.ಸಿ/ಜೆ.ಎಲ್.ಸಿ ಕೋರ್ಸ್‌ಗಳನ್ನು ಹೊರತುಪಡಿಸಿ) (ಆ) ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್ ಅನ್ನು ಹೊಂದಿರತಕ್ಕದ್ದು.
ವಯೋಮಿತಿ : ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ: 10.04.2024 ರಂದು ಈ ಕೆಳಕಂಡಂತೆ ಕನಿಷ್ಠ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,660 – ರೂ. 25,300 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ವಿಧಾನ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ತೋರಿಸುವ ಅಂಕ್ ಅನ್ನು ಆಯ್ಕೆ ಮಾಡಿ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು.
- ಅಭ್ಯರ್ಥಿಗಳು (ON-LINE) ಆನ್‌ಲೈನ್ ಮೂಲಕ ಒಂದು ಬಾರಿ ಮಾತ್ರ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆನಂತರವೇ ಆಯಾ ಅಭ್ಯರ್ಥಿಗಳಿಗೆ ಅನ್ವಯವಾಗುವ ವಿವರಗಳನ್ನು ಭರ್ತಿಮಾಡತಕ್ಕದ್ದು.
- ಅಭ್ಯರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಹಾಗೂ ಕಪ್ಪು ಶಾಹಿಯ ಸ್ಕೆಚ್/ಮಾರ್ಕರ್ ಪೆನ್‌ನಲ್ಲಿ ಸಹಿಯನ್ನು ನಿಗದಿಪಡಿಸಿದ ಅಳತೆಯಲ್ಲಿ ಸ್ಕ್ಯಾನ್ ಮಾಡಿ ಅರ್ಜಿಗೆ UPLOAD ಮಾಡಬೇಕು.
- ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿನ ವಿವರಗಳನ್ನು / ಮೀಸಲಾತಿಗಳನ್ನು, ತಿದ್ದುಪಡಿ | ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಪ್ರತ್ಯೇಕ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.
- ನಿಯಮಾನುಸಾರ ಆನ್‌ಲೈನ್ ಅರ್ಜಿಯಲ್ಲಿ ನಮೂದಿಸಲಾದ ಮಾಹಿತಿ ಆಧಾರದ ಮೇಲೆ ಮಾತ್ರವೇ ದಾಖಲೆಗಳ ಪರಿಶೀಲನೆ ಮಾಡಲಾಗುವುದರಿಂದ ವಯೋಮಿತಿ, ವಿದ್ಯಾರ್ಹತೆ, ಮೀಸಲಾತಿ ಪ್ರಮಾಣ ಪತ್ರ (ಮೀಸಲಾತಿ ಬಯಸಿದಲ್ಲಿ) ಹಾಗೂ ಇತರೆ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಅಧಿಸೂಚನೆಯ ಅನುಬಂಧದಲ್ಲಿ ಸೂಚಿಸಿರುವ ನಮೂನೆಯಂತೆ ಪಡೆದಿರತಕ್ಕದ್ದು. ತಪ್ಪಿದ್ದಲ್ಲಿ ಅವರ ಮೀಸಲಾತಿ/ಅಭ್ಯರ್ಥಿತನವನ್ನು ತಿರಸ್ಕರಿಸಲಾಗುವುದು.
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಮತ್ತು ಸಮಯದ ನಂತರ ಬರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
- ಫೋಟೋ ಮತ್ತು ಸಹಿಯನ್ನು ಅಪ್ಲೋಡ್ ಮಾಡದೇ ಇರುವ ಹಾಗೂ ಅರ್ಜಿ ಶುಲ್ಕ ಸಂದಾಯ ಮಾಡದ ಅಥವಾ ಭಾಗಶಃ ಅರ್ಜಿ ಶುಲ್ಕ ಸಂದಾಯ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
- ಅಭ್ಯರ್ಥಿಗಳು ಭರ್ತಿ ಮಾಡಿ ಸಲ್ಲಿಸಿದ ಅರ್ಜಿಯ ಒಂದು ಪ್ರತಿಯನ್ನು ತಮ್ಮ ಮಾಹಿತಿಗಾಗಿ ಕಡ್ಡಾಯವಾಗಿ ತಮ್ಮೊಂದಿಗೆ ಇಟ್ಟುಕೊಳ್ಳಲು ಸೂಚಿಸಿದೆ. ಸಂಸ್ಥೆಯಿಂದ ಯಾವುದೇ ಕಾರಣಕ್ಕೂ ಅರ್ಜಿಯ ಪ್ರತಿಯನ್ನು ಒದಗಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಅವಧಿ:
ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 10.03.2024
ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10.04.2024
ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: 13.04.2024 - ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಭರ್ತಿ ಮಾಡುವ ಮೊದಲು ಅರ್ಹತೆಗೆ ಸಂಬಂಧಿಸಿದ ಎಲ್ಲಾ ಸೂಚನೆಗಳನ್ನು ಓದಿಕೊಳ್ಳತಕ್ಕದ್ದು ಹಾಗೂ ನೀಡಿರುವ ಸೂಚನೆಗಳನ್ವಯ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು.ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸತಕ್ಕದ್ದು. ಇತರೆ ಪರೀಕ್ಷೆ ಅಥವಾ ನೇಮಕಾತಿಗಳಿಗೆ ಈಗಾಗಲೇಪಾವತಿಸಿರುವ ಅರ್ಜಿ ಶುಲ್ಕವನ್ನು ಪ್ರಸ್ತುತ ನೇಮಕಾತಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ. ನಿಗಧಿತ ಅರ್ಜಿ ಶುಲ್ಕವನ್ನು ಸಂದಾಯ ಮಾಡದಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.