ಬೆಂಗಳೂರು: ಕೆಪಿಎಸ್ಸಿಯಿಂದ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಆ ಸಂಪೂರ್ಣ ಮಾಹಿತಿಯನ್ನು ಮುಂದೆ ಓದಿ.
ಇಂದು ಕರ್ನಾಟಕ ಲೋಕಸೇವಾ ಆಯೋಗದಿಂದ ಪತ್ರಿಕ ಪ್ರಕಟಣೆ ಹೊರಡಿಸಲಾಗಿದೆ. ಅದರಲ್ಲಿ ಅಧಿಸೂಚಿಸಲಾದ ವಿವಿಧ ನೇಮಕಾತಿಗೆ ಸಂಬಂಧಿಸಿದಂತೆ ಈಕೆಳಕಂಡಂತೆ ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿಸುವುದಾಗಿ ತಿಳಿಸಿದೆ.
ಪ್ರಕಟಿತ ವೇಳಾಪಟ್ಟಿಯಂತೆ ಅಧಿಸೂಚನೆ ಹೊರಡಿಸಬೇಕಿರುವಂತ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಮುಖ್ಯ ಪರೀಕ್ಷೆಯು ದಿನಾಂಕ 28-03-2025ರಂದು ನಡೆಸಲು ನಿರ್ಧರಿಸಲಾಗಿದೆ. ಆ ಬಳಿಕ ಇತರೆ ಪರೀಕ್ಷೆಗಳನ್ನು ದಿನಾಂಕ 29-03-2025, 01-04-2025 ಮತ್ತು 02-04-2025ರಂದು ನಡೆಸಲು ನಿಗದಿ ಪಡಿಸಲಾಗಿದೆ.
2024ರ ಸಾಲಿನ ದ್ವಿತೀಯ ಅಧಿವೇಶನ ಇಲಾಖಾ ಪರೀಕ್ಷೆಗೆ ಅಧಿಸೂಚನೆ ಹೊರಡಿಸಬೇಕಿದ್ದು, ಅವುಗಳ ಪರೀಕ್ಷೆಯನ್ನು 2025ರ ಏಪ್ರಿಲ್ ತಿಂಗಳಿನಲ್ಲಿ ಮೂರು ಹಂತಗಳಲ್ಲಿ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದೆ.
ಹೀಗಿದೆ ಕೆಪಿಎಸ್ಸಿ ವಿವಿಧ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ