Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

BREAKING : ಚಿಕಾಗೋದಲ್ಲಿ ಗುಂಡಿನ ದಾಳಿ ; ನಾಲ್ವರು ಸಾವು, 14 ಮಂದಿಗೆ ಗಾಯ

03/07/2025 4:20 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜ.19, 25ರಂದು KPSC ಗ್ರೂಪ್-ಬಿ ವೃಂದದ ಹುದ್ದೆಗಳ ನೇಮಕಾತಿಗೆ ಪರೀಕ್ಷೆ: ಈ ನಿಯಮಗಳ ಪಾಲನೆ ಕಡ್ಡಾಯ
KARNATAKA

ಜ.19, 25ರಂದು KPSC ಗ್ರೂಪ್-ಬಿ ವೃಂದದ ಹುದ್ದೆಗಳ ನೇಮಕಾತಿಗೆ ಪರೀಕ್ಷೆ: ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow0915/01/2025 2:33 PM

ಶಿವಮೊಗ್ಗ : ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಜ.19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೆಪಿಎಸ್‌ಸಿ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾಗುತ್ತಿರುವ ಪರೀಕ್ಷೆಗಳ ಕುರಿತು ಪರೀಕ್ಷಾ ನಿಯೋಜಿತ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಿನಾಂಕ: 19-01-2025 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಪರೀಕ್ಷೆಯು ಶಿವಮೊಗ್ಗ ನಗರದ ಒಟ್ಟು 25 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ದಿ: 25-01-2025 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ನಿರ್ದಿಷ್ಟ ಪತ್ರಿಕೆ ಪರೀಕ್ಷೆಯು ನಗರದ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಜ.19 ರಂದು ನಡೆಯುವ ಸಾಮಾನ್ಯ ಪತ್ರಿಕೆ ಪರೀಕ್ಷೆಗೆ ನಗರದಲ್ಲಿ ಒಟ್ಟು 7182 ಅಭ್ಯರ್ಥಿಗಳು ಹಾಗೂ ಜ.25 ರಂದು ನಡೆಯುವ ನಿರ್ದಿಷ್ಟ ಪತ್ರಿಕೆಗೆ 6414 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ನಿರೀಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು ಮತ್ತು ಇತರೆ ಸಿಬ್ಬಂದಿಗಳನ್ನು ನಿಯೋಜಿಸಿ, ಸೂಕ್ತ ನಿರ್ದೇಶನ ಮತ್ತು ಸೂಚನೆಗಳನ್ನು ನೀಡಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೋಗ್ರಫಿ ಮಾಡಲಾಗುವುದು. ಎಲ್ಲ ಕೇಂದ್ರಗಳಲ್ಲಿ ಸಿಸಿ ಟಿವಿ ಇರುತ್ತದೆ. ಜೊತೆಗೆ ಜಾಮರ್‌ಗಳನ್ನು ಅಳವಡಿಸಲಾಗುವುದು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಎಲೆಕ್ಟಾçನಿಕ್ ವಸ್ತುಗಳಿಗೆ ಅವಕಾಶ ಇರುವುದಿಲ್ಲ.

ನಿಯೋಜಿತ ಪೊಲೀಸರಿಂದ ಅಭ್ಯರ್ಥಿಗಳ ತಪಾಸಣೆ ನಡೆಸಿ ಕೇಂದ್ರಗಳ ಒಳಗೆ ಬಿಡಲಾಗುವುದು. ಅಂಗವಿಕಲ ಅಭ್ಯರ್ಥಿಗಳಿಗ ಲಿಪಿಕಾರರ ಸೇವೆಯನ್ನು ಹಾಗೂ ಚಲನವಲನ ವೈಕಲ್ಯವುಳ್ಳ ವಿಕಲಚೇತನ ಅಭ್ಯರ್ಥಿಗಳಿಗೆ ವೀಲ್‌ಚೇರ್ ಒದಗಿಸಲಾಗುವುದು ಎಂದರು.

ಪರೀಕ್ಷಾ ದಿನದಂದು ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ.ಫಾಸಲೆಯಲ್ಲಿ ಸಾರ್ವಜನಿಕ ಪ್ರವೇಶ ನಿಷೇಧಿಸಿ ಆದೇಶಿಸಲಾಗಿದೆ ಎಂದ ಅವರು ಪರೀಕ್ಷಾ ಕೇಂದ್ರಗಳಲ್ಲಿ ಪೀಠೋಪಕರಣ ವ್ಯವಸ್ಥೆ, ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಮಾಡಬೇಕು. ನಿಯೋಜಿತ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪರೀಕ್ಷೆಗಳನ್ನು ಶಾಂತಿಯುತವಾಗಿ, ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಯಶಸ್ವಿಯಾಗಿ ನಡೆಸಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಡಿಡಿಪಿಐ ಮಂಜುನಾಥ್, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

BREAKING : ‘ಪೂಜಾ ಖೇಡ್ಕರ್’ಗೆ ಬಿಗ್ ರಿಲೀಫ್ : ಬಂಧನಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ | Puja Khedkar

BIG NEWS: ನುಡಿದಂತೆ ನಡೆದ ‘ಸಚಿವ ಜಮೀರ್ ಅಹ್ಮದ್’: ಮೂರು ಹಸು ಕೊಡಿಸಿ ಮಾನವೀಯತೆ

Share. Facebook Twitter LinkedIn WhatsApp Email

Related Posts

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM2 Mins Read

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM1 Min Read

BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ!

03/07/2025 3:56 PM1 Min Read
Recent News

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

BREAKING : ಚಿಕಾಗೋದಲ್ಲಿ ಗುಂಡಿನ ದಾಳಿ ; ನಾಲ್ವರು ಸಾವು, 14 ಮಂದಿಗೆ ಗಾಯ

03/07/2025 4:20 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

ಬಾಡಿಗೆ ಮನೆಯಲ್ಲಿ ವಾಸಿಸೋದು ಅಥ್ವಾ ಬ್ಯಾಂಕ್ ಸಾಲ ಪಡೆದು ಮನೆ ಖರೀದಿಸೋದು! ಎರಡರಲ್ಲಿ ಯಾವುದು ಬೆಸ್ಟ್ ಗೊತ್ತಾ.?

03/07/2025 4:08 PM
State News
KARNATAKA

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

By kannadanewsnow0503/07/2025 4:33 PM KARNATAKA 2 Mins Read

ಬೆಂಗಳೂರು : ಅಂಧ್ಯತ್ವ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಯೋಜನೆಯಡಿ ರಾಜ್ಯಾದ್ಯಂತ 393 ಶಾಶ್ವತ…

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ!

03/07/2025 3:56 PM

Rain Alert : ವಾಯುಭಾರ ಕುಸಿತ, ಮುಂದಿನ 1 ವಾರ ರಾಜ್ಯಾದ್ಯಂತ ಗಾಳಿ ಸಹಿತ ಭಾರೀ ಮಳೆ : ‘IMD’ ಮುನ್ಸೂಚನೆ

03/07/2025 3:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.