ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಾ ಸೇವಾ ಆಯೋಗವು (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೆಪಿಎಸ್ ಸಿಯಿಂ ಲೆಕ್ಕ ಸಹಾಯಕರ 242 ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಆಯೋಗವು ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರ ನಿಯಮಗಳು ಹಾಗೂ ತಿದ್ದುಪಡಿ ನಿಯಮ 2022ರಯ ಈ ಕೆಳಕಂಡ ಉಳಿಕೆ ಮೂಲ ವೃಂದದ ಗ್ರೂಪ್ 1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯಾರ್ಥಿಗಳಿಂದ On-line ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ
23-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
23-04-2023
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ
24-04-2023
ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ:
ಶೈಕ್ಷಣಿಕ ವಿದ್ಯಾರ್ಹತೆ:- ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ, ಆಯಾ ಹುದ್ದೆಗಳ ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು, ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ
ವಯೋಮಿತಿ:- ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ, ಆಯಾ ಹುದ್ದೆಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.