ವಿಜಯಪುರ: ಈ ಹಿಂದೆ ಕೆಪಿಎಸ್ಸಿ ಕೆಎಎಸ್ ಪರೀಕ್ಷೆಯಲ್ಲಿ ಎಡವಟ್ಟು ಮಾಡಿದ್ದ ಕಾರಣ ಪರೀಕ್ಷೆ ರದ್ದುಗೊಳಿಸಿ ಮರು ಪರೀಕ್ಷೆ ನಡೆಸಲಾಗಿತ್ತು. ಈಗ ಮತ್ತೊಂದು ಎಡವಟ್ಟು ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ನೀಡಲಾದ ಓಎಂಆರ್ ಪತ್ರಿಕೆಯ ನೋಂದಣಿ ಸಂಖ್ಯೆಯೇ ಬದಲಾಗಿದ್ದು, ಅಭ್ಯರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದಂತ ಘಟನೆ ನಡೆದಿದೆ.
ರಾಜ್ಯಾಧ್ಯಂತ ಇಂದು ಕೆಪಿಎಸ್ಸಿಯ ಕೆಎಎಸ್ 384 ಹುದ್ದೆಗಳಿಗೆ ಪೂರ್ವಭಾವಿ ಮರು ಪರೀಕ್ಷೆ ನಡೆಸಲಾಯಿತು. ವಿಜಯಪುರದ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಮಹಾ ಎಡವಟ್ಟು ಮಾಡಿರುವುದು ತಿಳಿದು ಬಂದಿದೆ.
ಅಭ್ಯರ್ಥಿಗಳಿಗೆ ನೀಡಲಾಗಿದ್ದಂತ ಓಎಂಆರ್ ಶೀಟ್ ನೋಂದಣಿ ಸಂಖ್ಯೆಯನ್ನೇ ಅದಲು ಬದಲು ಮಾಡಲಾಗಿದೆ. ಇದನ್ನು ಗಮನಿಸಿದಂತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇನ್ನೂ ಸಿಕ್ಯಾಬ್ ಸಂಸ್ಥೆಯ ಎರಡು ಕೇಂದ್ರಗಳು, ಮರಾಠಿ ಮಹಾವಿದ್ಯಾಲಯ, ವಿಕಾಸ ವಿದ್ಯಾಲಯದಲ್ಲಿ ನಾಲ್ಕು ಕೇಂದ್ರಗಳಲ್ಲಿ ಓಎಂಆರ್ ನಂಬರ್ ಹಾಗೂ ನೋಂದಣಿ ಸಂಖ್ಯೆ ಬದಲಾವಣೆ ಆಗಿರೋದು ಕಂಡು ಬಂದಿದೆ. ಇದರ ವಿರುದ್ಧ ಅಭ್ಯರ್ಥಿಗಳು ಎರಡು ಗಂಟೆಗಳ ಕಾಲ ಪರೀಕ್ಷಾ ಕೇಂದ್ರದ ಹೊರಗೆ ಪ್ರತಿಭಟನೆ ನಡೆಸಿದರು.
ಅಫ್ಘಾನ್ ತಾಲಿಬಾನ್ ಪಡೆಗಳ ಗುಂಡಿನ ದಾಳಿ: ಪಾಕ್ ಸೈನಿಕ ಸಾವು, 11 ಮಂದಿಗೆ ಗಾಯ