ಬೆಂಗಳೂರು: ನಾಳೆ ಕೆಪಿಎಸ್ಸಿಯಿಂದ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚುವರಿ ಸಾರಿಗೆ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ.
ಈ ಕುರಿತಂತೆ ಕೆಎಸ್ಆರ್ ಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 27.08.2024 ರಂದು ಕರ್ನಾಟಕ ಲೋಕಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಪೂರ್ವಭಾವಿ ಪರೀಕ್ಷೆ ನಡೆಸಲಿದ್ದು, ಬೆಂಗಳೂರಿನಲ್ಲಿ ವಾಸಿಸುತ್ತಿರುವಂತಹ ಸುಮಾರು ಅಭ್ಯರ್ಥಿಗಳಿಗೆ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲಾಗಳಾದ ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ಇನ್ನಿತರೆ ಜಿಲ್ಲೆಗಳಿಗೆ ಪರೀಕ್ಷೆ ಕೇಂದ್ರಗಳನ್ನು ಗುರುತಿಸಿದ್ದು ನಿಗದಿತ ಸಮಯದೊಳಗೆ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸುವಂತೆ ಎಕ್ಸ್ ಖಾತೆ ಮೂಲಕ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಸುಮಾರು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದು ತ್ವರಿತಗತಿಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ನಿಯಮಾನುಸಾರ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಸನ್ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿರವರು ಕೋರಿರುತ್ತಾರೆ ಎಂದಿದೆ.
ಅದರಂತೆ, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಅಡಚಣೆಯಾಗದಂತೆ ಸದರಿ ದಿನಗಳಂದು ವಿಭಾಗದವತಿಯಿಂದ ಪಮುಖ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಿಂದ ಪರೀಕ್ಷೆ ನಡೆಯುವ ಕೇಂದ್ರ ಸ್ಥಾನ ಸ್ಥಳಗಳಿಗೆ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮಕೈಗೊಳ್ಳುವಂತೆ ಸೂಚಿದೆ.
BREAKING: ಪೇಟಿಎಂ ಸಂಸ್ಥಾಪಕ ‘ವಿಜಯ್ ಶೇಖರ್ ಶರ್ಮಾ’ಗೆ ಸೆಬಿ ಶೋಕಾಸ್ ನೋಟಿಸ್ | Vijay Shekhar Sharma
ಬೆಂಗಳೂರು ಜನತೆ ಗಮನಕ್ಕೆ: ಆ.28ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut