ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಕರೆಯಲಾಗಿದ್ದಂತ ಕೆಎಎಸ್ ಅಧಿಕಾರಿಗಳ ಹುದ್ದೆಗಳಿಗೆ ನಿಗದಿ ಪಡಿಸಿದ್ದಂತ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.
ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ:21-06-2024ರಲ್ಲಿ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ (one time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿದೆ ಅಂತ ತಿಳಿಸಿದ್ದಾರೆ.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು 15 ದಿನಗಳ ಕಾಲಾವಕಾಶವನ್ನು ನೀಡುವಂತೆ ಆದೇಶಿಸಿರುತ್ತದೆ. ಈ ಹಿನ್ನೆಲೆಯಲ್ಲಿ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳಿಗೆ ದಿನಾಂಕ:21-07-2024ರಂದು ನಡೆಸಬೇಕಿದ್ದ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:25-08-2024ರಂದು ನಡೆಸಲು ಮರುನಿಗದಿಪಡಿಸಿರುತ್ತದೆ ಅಂತ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆ: ‘ಬಿಜೆಪಿ’ಗೆ ಭಾರೀ ಮುಖಭಂಗ, ಗೆದ್ದು ಬೀಗಿದ ‘ಕಾಂಗ್ರೆಸ್ ಅಭ್ಯರ್ಥಿ’ಗಳು
BREAKING: ಸದನದಲ್ಲೇ ಕುಸಿದು ಬಿದ್ದ ಕಾಂಗ್ರೆಸ್ ಸಂಸದೆ ಪುಲೋ ದೇವಿ, ಆಸ್ಪತ್ರೆಗೆ ದಾಖಲು..!