ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಖಾಲಿ ಇರುವ ಕೈಗಾರಿಕಾ ವಿಸ್ತರಣಾ ಅಧಿಕಾರಿ ಮತ್ತು ಗ್ರಂಥಪಾಲಕ (ಗ್ರೂಪ್ ಸಿ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ.
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 300 ರೂ.
ಮಾಜಿ ಸೈನಿಕರಿಗೆ: 50 ರೂ.
ಎಸ್ಸಿ/ಎಸ್ಟಿ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶೂನ್ಯ
ಪಾವತಿ ವಿಧಾನ: ಆನ್ ಲೈನ್ ಮೂಲಕ
ಪ್ರಮುಖ ದಿನಾಂಕಗಳು : ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 29-04-2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 28-05-2024
ವಯೋಮಿತಿ (28-05-2024 ರಂತೆ)
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 35 ವರ್ಷ
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 38 ವರ್ಷ
ಎಸ್ಸಿ/ಎಸ್ಟಿ/ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 40 ವರ್ಷ
ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ವಯಸ್ಸಿನ ವಿವರಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡಿ.
ಅರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜ್ಞಾನ/ ವಾಣಿಜ್ಯ/ ಬಿಸಿನೆಸ್ ಅಡ್ಮಿನಿಸ್ಟ್ರೇಷನ್/ ಇಂಜಿನಿಯರಿಂಗ್ನಲ್ಲಿ ಪದವಿ ಪಡೆದಿರಬೇಕು.