ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಲೋಕಸೇವಾ ಆಯೋಗವು 247 ಪಿಡಿಒ, 327 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 247 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳು ಹಾಗೂ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಸೇರಿ ೫೭೪ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗಕ್ಕೆ 150 ಪಿಡಿಒ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.
ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಮೇ. 15 ಕೊನೆಯ ದಿನವಾಗಿದೆ. ಬಿಬಿಎಂಪಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಂತರ್ಜಲ ನಿರ್ದೇಶನಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಹುದ್ದಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಮೇ. 14 ಕೊನೆಯ ದಿನವಾಗಿದೆ.