ಬೆಂಗಳೂರು: ಸೆಪ್ಟೆಂಬರ್.14 ಹಾಗೂ 15ರಂದು ಕೆಪಿಎಸ್ಸಿಯ ಗ್ರೂಪ್-ಬಿ ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಾ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ.
ಇಂದು ಆದೇಶ ಹೊರಡಿಸಿರುವಂತ ಅವರು, ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ಪರೀಕ್ಷೆಗಳನ್ನು ಮೊದಲ ಹಂತದಲ್ಲಿ ದಿನಾಂಕ: 14-09-2024 ಮತ್ತು 15-09-2024 ರಂದು ಹಾಗೂ ದಿನಾಂಕ: 18- 09-2024 ಮತ್ತು 19-09-2024 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಮತ್ತು ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಹತ್ತಿರದಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ನಮೂದಿತ ಉಲ್ಲೇಖದಲ್ಲಿ ಕೋರಲಾಗಿರುತ್ತದೆ ಎಂದಿದ್ದಾರೆ.
ಈ ಸಂಬಂಧ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಹಾಗೂ ಗುಪ್ತವಾರ್ತಾ ಮಾಹಿತಿಯಿಂದ ಮೇಲ್ಕಂಡ ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವುದು ಸೂಕ್ತವೆಂದು ತಿಳಿದುಬಂದಿರುತ್ತದೆ ಎಂದು ತಿಳಿಸಿದ್ದಾರೆ.
ಈ ದಿಸೆಯಲ್ಲಿ ಮೇಲ್ದಂಡ ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ ನನಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ 163 ಪ್ರಕರಣದ ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಬಿ. ದಯಾನಂದ, ಐಪಿಎಸ್, ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಆದ ನಾನು, ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಮೊದಲ ಹಂತದಲ್ಲಿ ದಿನಾಂಕ: 14-09-2024 ಮತ್ತು 15-09-2024 ರಂದು ಹಾಗೂ ದಿನಾಂಕ: 18-09-2024 ಮತ್ತು 19- 09-2024 ರಂದು ನಡೆಯಲಿರುವ ಪರೀಕ್ಷಾ ಸಮಯದಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಹತ್ತಿರದಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.
ಈ ನಡವಳಿಯನ್ನು ನನ್ನ ಸಹಿ ಮತ್ತು ನನ್ನ ಕಛೇರಿಯ ಮೊಹರಿನಲ್ಲಿ 2024 ರ ಸೆಪ್ಟೆಂಬರ್ ಮಾಹೆಯ ದಿನಾಂಕ 11-09-2024ರಂದು ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಮಾರ್ಗ ಬದಲಾವಣೆ, ಸಂಚಾರ ರದ್ದು | South Western Railway
ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಈ ದಾಖಲೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ!