ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಹೈದ್ರಬಾದ್-ಕರ್ನಾಟಕ ವೃಂದದ-201 ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಜನವರಿ 9, 2023 ಹಾಗೂ ಹೆಚ್ಚುವರಿ ಪಟ್ಟಿಯನ್ನು ಮೇ 5, 2023 ರಂದು ಪ್ರಕಟಿಸಲಾಗಿರುತ್ತದೆ.
ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ 15 ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲಾನುಕ್ರಮದನುಸಾರ 34 ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಹಾಗೂ ಕಟ್ಆಫ್ ಅಂಕಗಳ ಪಟ್ಟಿಯನ್ನು ಸಿದ್ಧಪಡಿಸಿ ಜೂನ್ 15 ರಂದು ಆಯೋಗದ ವೆಬ್ಸೈಟ್ http://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.