ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲ್ಪಟ್ಟಿದ್ದಂತ 146 ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಆಯ್ಕೆಯಾಗಿರುವಂತ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.
ಕೆಪಿಎಸ್ಸಿಯಿಂದ ಸಾರಿಗೆ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 127 + ಹೈದರಾಬಾದ್ ಕರ್ನಾಟಕ ವೃಂದದ 23 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ದಿನಾಂಕ 30-04-2022ರಂದು ಆಯ್ಕೆಗೊಂಡಿದ್ದಂತ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿತ್ತು.
ಆದ್ರೇ ಈ ಪಟ್ಟಿಯಲ್ಲಿ ಆಯ್ಕೆಗೊಂಡಿದ್ದಂತ ಭೀನಗೌಡ ಪಾಟೀಲ್, ಪ್ರಶಾಂತ್ ಮುನೋಳಿ ಮತ್ತು ದೀಪಕ್ ಎಲ್ ಎಂಬುವರು ಆಯ್ಕೆ ಪಟ್ಟಿಯಿಂದ ತಮ್ಮನ್ನು ಕೈಬಿಡುವಂತೆ ಖುದ್ದು ಆಯೋಗಕ್ಕೆ ಹಾಜರಾಗಿ ಮನವಿ ಮಾಡಿದ್ದ ಹಿನ್ನಲೆಯಲ್ಲಿ, ಇವರುಗಳ ಕೋರಿಕೆಯನ್ನು ಪರಿಗಣಿಸಿ, ಸದರಿ ಅಭ್ಯರ್ಥಿಗಳನ್ನು ಆಯ್ಕೆ ಪಟ್ಟಿಯಿಂದ ಕೈಬಿಟ್ಟು, ಮೂವರು ಅಭ್ಯರ್ಥಿಗಳ ಬದಲಿಗೆ ಜ್ಯೇಷ್ಠತೆ, ಮೀಸಲಾತಿಗಳ ಅನ್ವಯ ಆಯ್ಕೆಪಟ್ಟಿಯನ್ನು ಪರಿಷ್ಕರಿಸಿ, ಇದೀಗ ಅಂತಿಮ ಆಯ್ಕೆಪಟ್ಟಿಯನ್ನು https://kpsc.kar.nic.in/ ಜಾಲತಾಣದಲ್ಲಿ ಪ್ರಕಟಿಸಿದೆ.
‘ಭಗವತಿ ಏತ ನೀರಾವರಿ ಯೋಜನೆ’ಗೆ ‘ಸಚಿವ ಸಂಪುಟ’ ಅಸ್ತು – ಸಚಿವ ಗೋವಿಂದ ಕಾರಜೋಳ