ನವದೆಹಲಿ : ಕೃಷ್ಣ ನದಿ ನೀರು ಹಂಚಿಕೆ ವಿವಾದದ ರಾಜ್ಯ ಸರ್ಕಾರದ ಮಧ್ಯಂತರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.
ನ್ಯಾ.ಜೆ.ಬಿ ಪಾರ್ದಿವಾಲ, ನ್ಯಾ ಸೂರ್ಯಕಾಂತ್ ಅವರಿದ್ದ ಪೀಠ ರಾಜ್ಯ ಸರ್ಕಾರದ ಮಧ್ಯಂತರ ಅರ್ಜಿ ವಿಚಾರಣೆಯನ್ನು ಡಿಸೆಂಬರ್ 6 ಕ್ಕೆ ಮುಂದೂಡಿದೆ. ಕೃಷ್ಣ ನದಿ ನೀರು ಹಂಚಿಕೆಗೆ ಅಧಿಸೂಚನೆಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಚಾರಣೆಯನ್ನು ಡಿಸೆಂಬರ್ 6 ಕ್ಕೆ ಮುಂದೂಡಿದೆ.
ಈ ಹಿಂದೆ ನ್ಯಾಯಮೂರ್ತಿ ನ್ಯಾಯಮೂರ್ತಿ ಭೋಪಣ್ಣ ಅವರಿದ್ದ ಪೀಠ ಕೃಷ್ಣ ನದಿ ನೀರು ಹಂಚಿಕೆ ವಿವಾದದ ವಿಚಾರಣೆಯಿಂದ ಹಿಂದೆ ಸರಿದಿತ್ತು. ನಂತರ ನ್ಯಾ.ಜೆ.ಬಿ ಪಾರ್ದಿವಾಲ, ನ್ಯಾ ಸೂರ್ಯಕಾಂತ್ ಅವರನ್ನೊಳಗೊಂಡ ಪೀಠ ವಿಚಾರಣೆ ಕೈಗೆತ್ತಿಕೊಂಡಿದೆ. ಕೃಷ್ಣಾ ಜಲ ವಿವಾದ ನ್ಯಾಯಮಂಡಳಿಯು ನದಿ ಪಾತ್ರದ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರ ಪ್ರದೇಶಗಳಿಗೆ ಕೃಷ್ಣಾ ನದಿ ನೀರನ್ನು ಹಂಚಿಕೆ ಮಾಡಿ ತೀರ್ಪು ನೀಡಿತ್ತು.
‘ಪ್ರಧಾನಿ ಮೋದಿ ಅತ್ಯಾಚಾರಿಗಳ ಪರ ನಿಲ್ಲುತ್ತಾರೆ’ : ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ಧಾಳಿ
BREAKING NEWS ; ಭಾರತದ ನಿಲುವಿಗೆ ಬೆದರಿದ ಪಾಕ್ ; ‘ಏಕದಿನ ವಿಶ್ವಕಪ್’ನಿಂದ ಹಿಂದೆ ಸರಿಯುವ ಬೆದರಿಕೆ