ಆಲಮಟ್ಟಿ: ಗಂಗಾ ಆರತಿ ಮಾದರಿಯಲ್ಲಿ ಕೃಷ್ಣಾ ಆರತಿ ಕಾರ್ಯಕ್ರಮ ನಡೆಸಬೇಕು ಎಂದು ಸಚಿವರಾದ ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್ ಮತ್ತು ಆರ್.ಬಿ.ತಿಮ್ಮಾಪುರ ಅವರು ಸೇರಿದಂತೆ ಶಾಸಕರು ಮನವಿ ಮಾಡಿದ್ದಾರೆ. ತುಂಗಾ ಆರತಿ ಈಗಾಗಲೇ ನಡೆಯುತ್ತಿದೆ. ಕಾವೇರಿ ಆರತಿ ನಡೆಸಲು ಸಮಿತಿ ರಚನೆ ಮಾಡಲಾಗಿದೆ. ಅದೇ ರೀತಿ ಕೃಷ್ಣಾ ಆರತಿಯನ್ನು ಪರಿಗಣಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಲಾಲ್ ಬಹದ್ದೂರ್ ಶಾಸ್ತ್ರೀ (ಆಲಮಟ್ಟಿ) ಅಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೂಡಿ ಬಾಗಿನ ಅರ್ಪಿಸಿದ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಆಲಮಟ್ಟಿ ಅಣೆಕಟ್ಟಿನ ಉದ್ಯಾನವನ ಉತ್ತಮವಾಗಿದೆ. ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದೆ. ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸಲು ಏನು ಕೆಲಸ ಮಾಡಬೇಕೋ ಅದನ್ನು ಸರ್ಕಾರ ಮಾಡಲಿದೆ” ಎಂದರು.
ತಮಿಳುನಾಡಿಗೆ ಹೆಚ್ಚುವರಿ 100 ಟಿಎಂಸಿ ನೀರು ಹರಿದಿದೆ
“ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಬೇಕಿತ್ತು. ನಿಗದಿತ ನೀರಿಗಿಂತ 100 ಟಿಎಂಸಿ ಹೆಚ್ಚುವರಿ ನೀರನ್ನು ಹರಿಸಲಾಗಿದೆ. ನಮ್ಮಲ್ಲಿ ಹೆಚ್ಚುವರಿ ನೀರನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಈ ಎಲ್ಲಾ ಕಾರಣಗಳನ್ನಿಟ್ಟುಕೊಂಡು ಮೇಕೆದಾಟು ಯೋಜನೆ ಅನುಮತಿಗೆ ಮನವಿ ಮಾಡಲಾಗುವುದು” ಎಂದು ತಿಳಿಸಿದರು.
“ಕಳೆದ ವರ್ಷ ರಾಜ್ಯದ 220 ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೆವು. ಮೋಡಕ್ಕೆ ಯಾವ ಸರ್ಕಾರ ಇದೆ ಎಂದು ಗೊತ್ತಾಗುತ್ತದೆಯೇ? ಮೂರು- ನಾಲ್ಕು ವರ್ಷಗಳಿಗೆ ಒಮ್ಮೆ ಬರಗಾಲ ಬರುವುದು ಪ್ರಕೃತಿ ನಿಯಮ. ರಾಜ್ಯದ ಎಲ್ಲಾ ಪ್ರಮುಖ ಅಣೆಕಟ್ಟುಗಳು ತುಂಬಿವೆ. ಒಂದಷ್ಟು ಜಿಲ್ಲೆಗಳಲ್ಲಿ ಕೆರೆಗಳು ತುಂಬಿಲ್ಲ” ಎಂದು ಹೇಳಿದರು.
BREAKING: ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗೆ ‘ತಾಂತ್ರಿಕ ಸಮಿತಿ’ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್
BIG NEWS : ರಾಜ್ಯದಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 2 ಲಕ್ಷ ದಂಡ ಜೊತೆಗೆ 7 ವರ್ಷ ಜೈಲು ಶಿಕ್ಷೆ ಫಿಕ್ಸ್