Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!

Too much sex: ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ? ತಜ್ಞರ ಮಾಹಿತಿ ಇಲ್ಲಿದೆ

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜೊತೆಗೆ ಚರ್ಚೆ- HDK
KARNATAKA

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜೊತೆಗೆ ಚರ್ಚೆ- HDK

By ವಸಂತ ಬಿ ಈಶ್ವರಗೆರೆ

ಕೋಲಾರ: ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಕೋಲಾರದಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಈ ಜಿಲ್ಲೆಗಳಿಗೆ ನದಿಯ ನೀರು ಕೊಡುತ್ತೇವೆಂದು ಹೇಳಿ ಎತ್ತಿನಹೊಳೆ ಯೋಜನೆ ಮಾಡಿದರು. ಆದರೆ ಬೆಂಗಳೂರಿನ ರೊಚ್ಚು ನೀರು ಕೊಟ್ಟರು. ಮೂರನೇ ಹಂತದ ಶುದ್ಧೀಕರಣ ಮಾಡಿ ಎಂದರೂ ಮಾಡುತ್ತಿಲ್ಲ. ಇಂತಹ ಸಂದರ್ಭದಲ್ಲಿ ಕೃಷ್ಣಾ ನದಿಯ ನೀರು ಬಿಟ್ಟರೆ ನಮಗೆ ಬೇರೆ ದಾರಿ ಇಲ್ಲ ಎಂದು ಎಂದರು.

ಈ ಜಿಲ್ಲೆಗೆ ಕೃಷ್ಣಾ ನೀರು ತರುವ ಬಗ್ಗೆ ಸಂಸದರಾದ ಮಲ್ಲೇಶ್ ಬಾಬು ಅವರು ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ನನ್ನ ಬೆಂಬಲವೂ ಇದೆ. ಕೃಷ್ಣ ನದಿ‌ ನೀರನ್ನು ಹರಿಸುವ ಕುರಿತು ಮಲ್ಲೇಶ್ ಬಾಬು ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಆಂಧ್ರದ ಮುಖ್ಯಮಂತ್ರಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಕೆಲಸ ಸಾಧಿಸಬೇಕಿದೆ. ಅದಕ್ಕಾಗಿ ಅವರನ್ನು‌ ಭೇಟಿ ಮಾಡುತ್ತೇನೆ. ಅವರ ರಾಜ್ಯದ ಜನರ ಭಾವನೆಗಳಿಗೆ ಧಕ್ಕೆ ಆಗದ ರೀತಿಯಲ್ಲಿ ಅವರ ಸಹಕಾರ ತೆಗೆದುಕೊಳ್ಳುವ ಕೆಲಸ‌ ಮಾಡುತ್ತೇವೆ. ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಮಲ್ಲೇಶ್ ಬಾಬು ಅವರನ್ನು ಗೆಲ್ಲಿಸಿದ ರುಣ ನಮ್ಮ‌ಮೇಲಿದೆ. ಅದನ್ನು ತೀರಿಸುವ ಕೆಲಸ ಮಾಡುವ ಪ್ರಯತ್ನ ಮಾಡುತ್ತೇವ ಎಂದು ಕೇಂದ್ರ ಸಚಿವರು ಹೇಳಿದರು.

2014ರಲ್ಲಿ ಚಿಕ್ಕಬಳ್ಳಾಪುರದಲ್ಲಿ ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆಆಡಿದ ದಿನವೇ ನಾನು ಕೋಲಾರದಲ್ಲಿದ್ದೆ. ಅವತ್ತೇ ಹೇಳಿದ್ದೆ. ಇಲ್ಲಿ ನೀರು ಸಿಗುವುದಿಲ್ಲ, ಸರಕಾರ ಸುಳ್ಳು ಹೇಳುತ್ತಿದೆ ಎಂದು ಹೇಳಿದ್ದೆ. ಆದರೂ ಐದೇ ವರ್ಷದಲ್ಲಿ ನೀರು ಕೊಡುತ್ತೇವೆ ಎಂದು ಹೇಳಿದರು. ನಾನು ನಮ್ಮ ಕಡೆಯ ಹಳ್ಳಿ ಭಾಷೆಯಲ್ಲಿ ಅವತ್ತೇ ಹೇಳಿದ್ದೆ. ಎತ್ತಿನಹೊಳೆಯಿಂದ ಎರಡು ವರ್ಷಗಳಲ್ಲಿ‌ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ಳುವೆ ಎಂದು‌ ಹೇಳಿದ್ದೆ. ನನ್ನ ತಲೆಯಲ್ಲಿ ಕೂದಲು ಹೋಯಿತೇ ಹೊರತು ಈ ಜಿಲ್ಲೆಗಳಿಗೆ ನೀರು ಹರಿಯಲಿಲ್ಲ ಎಂದು ಅವರು ಲೇವಡಿ ಮಾಡಿದರು.

ಅವತ್ತಿನ ಕಾಂಗ್ರೆಸ್ ಸರ್ಕಾರ ನೀರು ಕೊಡುವುದಾಗಿ ಹೇಳಿ‌ ಹತ್ತು ವರ್ಷ ಆಗಿದೆ. ಆ ಯೋಜನೆಯ ಹೆಸರಿನಲ್ಲಿ ಎಷ್ಟೆಲ್ಲಾ ಲೂಟಿ ಆಗಿದೆ ಎನ್ನುವುದು ಗೊತ್ತಿದೆ. ಸಿಎಜಿ ವರದಿಯಲ್ಲಿ ಇದೆಲ್ಲವೂ ಇದೆ. ಅನರ್ಹ ಗುತ್ತಿಗೆದಾರರಿಗೆ ಕಾಮಗಾರಿ ಕೊಟ್ಟಿದ್ದಾರೆ, ಕಳಪೆ ಕಾಮಗಾರಿ ಆಗಿ ಹಣ ದುರುಪಯೋಗ ಆಗಿದೆ ಎಂದು ವರದಿಯಲ್ಲಿ ಉಲ್ಲೇಖವಿದೆ. ಈಗ ₹30,000 ಕೋಟಿಗೆ ಎತ್ತಿನಹೊಳೆ ಯೋಜನಾ ವೆಚ್ಚ ತಲುಪಿದೆ. ಇದೆಲ್ಲಾ ನಮ್ಮ ಶ್ರೀನಿವಾಸಪುರದ ಬುದ್ದಿವಂತ ಮಾಜಿ ಶಾಸಕರಿಗೆ ಗೊತ್ತಿರಲಿಲ್ಲವೇ? ಎಂದು ಪ್ರಶ್ನಿಸಿದರು.

ಬೆಂಗಳೂರಿನ ರೊಚ್ಚು ನೀರಿನಿಂದಾಗಿ ಸಣ್ಣ ಮಕ್ಕಳು ಕೂಡ ಕಾಯಿಲೆಗೆ ತುತ್ತಾಗುತ್ತಿವೆ. ನದಿಯ ನೀರು ಕೊಡುತ್ತೇವೆ ಎಂದವರು ರೊಚ್ಚು ನೀರು ಕೊಟ್ಟು ಮೋಸ ಮಾಡಿದರು. ಈ ಜಿಲ್ಲೆಗಳ ಜನ ಕಾಂಗ್ರೆಸ್ಸಿಗರಿಗೆ ಏನು ದ್ರೋಹ ಮಾಡಿದ್ದರು? ಭಾರತೀಯ ವಿಜ್ಞಾನ ಸಂಸ್ಥೆ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ವರದಿ ನೀಡಿವೆ. ಅವುಗಳನ್ನು ನೋಡಿದರೆ ಈ ಜಿಲ್ಲೆಗಳಿಗೆ ಆಗಿರುವ ಹಾನಿ ಏನೆಂಬುದು ಗೊತ್ತಾಗುತ್ತದೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಮೊದಲು ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಬೆಳೆಯುತ್ತಿದ್ದ ತರಕಾರಿಗಳನ್ನು ದೇಶ ವಿದೇಶಗಳಲ್ಲಿ ಪೈಪೋಟಿಗೆ ಬಿದ್ದು ಖರೀದಿ ಮಾಡುತ್ತಿದ್ದರು. ಇವತ್ತು ಈ ಭಾಗದ ತರಕಾರಿಯನ್ನು ಕೇಳುವವರೇ ಇಲ್ಲ. ಈಗ ನೋಡಿದರೆ 2027ಕ್ಕೆ ಎತ್ತಿನಹೊಳೆ ನೀರು ಕೊಡುತ್ತೇವೆ ಎಂದು ಸಬೂಬು ಹೇಳುತ್ತಿದ್ದಾರೆ! ಎತ್ತಿನಹೊಳೆಯ ಯಂತ್ರೋಪಕರಣಗಳು ಈಗಾಗಲೇ ತುಕ್ಕು ಹಿಡಿಯುತ್ತಿವೆ. ಕೋಲಾರ, ಚಿಕ್ಕಬಳ್ಳಾಪುರ ಜನರೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕೆಯಲ್ಲಿ ಬಂದ ಒಂದು ವರದಿಯನ್ನು ಗಮನಿಸಿ ಬಂಗಾರಪೇಟೆಯ ಯರಗೋಳ್ ಯೋಜನೆ ಅನುಷ್ಠಾನಕ್ಕೆ ನಾನು ತೀರ್ಮಾನ ಮಾಡಿದ್ದೆ. ಆದರೆ, ದುರಂತವೆಂದರೆ ಯರಗೋಳ್ ಜಲಾಶಯಕ್ಕೆ ಕೂಡ ಕೆಸಿ ವ್ಯಾಲಿಯ ರೊಚ್ಚು ನೀರು ಹರಿಸುತ್ತಿದ್ದಾರೆ. ಎತ್ತಿನಹೊಳೆ ದುಡ್ಡು ಹೊಡೆಯುವ ಕಾರ್ಯಕ್ರಮ, ಇದನ್ನು ಶಂಕುಸ್ಥಾಪನೆ ದಿನವೇ ಹೇಳಿದ್ದೆ. ಅದು ಇವತ್ತು ಸತ್ಯವಾಗಿದೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸರ್ಕಾರಕ್ಕೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ನೀರು ಕೊಡಲು ಇನ್ನು ಎಷ್ಟು ದಿನ ಬೇಕು? ಎಷ್ಟು ದಿನ ಹೀಗೆಯೇ ಸುಳ್ಳು ಹೇಳಿಕೊಂಡು ತಿರುಗುತ್ತೀರಿ? ನಾಡಿನ ಜನರು 140 ಶಾಸಕರನ್ನು‌ ಗೆಲ್ಲಿಸಿ ಕೊಟ್ಟು ಕೆಲಸ ಮಾಡಿ ಎಂದು ಹೇಳಿದರೆ, ಇವರು ಮಾತ್ರ ಕುರ್ಚಿ ಕಿತ್ತಾಟ ನಡೆಸುತ್ತಿದ್ದಾರೆ. ಮಾತೆತ್ತಿದರೆ ಕೇಂದ್ರ ಸರ್ಕಾರದ ಬೆರಳು ಮಾಡುತ್ತಾರೆ. ರಾಜ್ಯದ ಕೆಲಸಗಳಿಗೆ ಸಂಬಂಧಿಸಿ ಈವರೆಗೂ ಸಿಎಂ, ಡಿಸಿಎಂ ಸೇರಿ ಯಾವೊಬ್ಬ ಸಚಿವರು ನಮ್ಮನ್ನು ಭೇಟಿ ಮಾಡಿಲ್ಲ. ಆದರೂ ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ನಮ್ಮ ಪ್ರಯತ್ನದಿಂದ ಇತಿಹಾಸದಲ್ಲಿ ಮೊದಲ ಬಾರಿಗೆ ಕೆಂದ್ರ ಸರ್ಕಾರ ಮಾವಿಗೆ ಬೆಂಬಲ‌ ಬೆಲೆ‌ ನೀಡಿದೆ. ತಂಬಾಕು ಬೆಳೆಗಾರರ ಹಿತರಕ್ಷಣೆ ಮಾಡಿದ್ದೇವೆ. ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ್ದೇವೆ ಎಂದು ಅವರು ಹೇಳಿದರು.

ರಮೇಶ್ ಕುಮಾರ್ ಗೆ ನೋಟಿಸ್; ನನಗೆ ಸಂಬಂಧವಿಲ್ಲ ಎಂದ ಹೆಚ್ಡಿಕೆ:

ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ನೋಟಿಸ್ ನೀಡಿರುವುದಕ್ಕೂ ನನಗೂ ಯಾವ ಸಂಬಂಧವೂ ಇಲ್ಲ ಎಂದು ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರು ಸ್ಪಷ್ಟಪಡಿಸಿದರು.

ಬಿಡದಿಯಲ್ಲಿ ಈ ಸರ್ಕಾರ ನನಗೂ ನೋಟಿಸ್ ಕೊಟ್ಟು ಕೊಡಬಾರದ ಕಾಟ ನೀಡುತ್ತಿದೆ. ಅದಕ್ಕೆ ರಮೇಶ್ ಕುಮಾರ್ ಅವರು ಕಾರಣ ಎಂದು ಹೇಳಿದರೆ ಆಗುತ್ತದೆಯೇ? ನನ್ನ ವಿಚಾರಕ್ಕೆ ಎಸ್ ಐಟಿ ರಚನೆ ಮಾಡಿದ್ದಾರೆ. ಅವರ ವಿಚಾರಕ್ಕೆ ಯಾಕೆ ರಚನೆ ಮಾಡಿಲ್ಲ ಏಕೆ? ಕೋರ್ಟುಗಳು ಇವೆ, ಹೋರಾಟ ಮಾಡಲಿ, ನಾನು ಕೂಡ ಅದನ್ನೇ ಮಾಡುತ್ತಿದ್ದೇನೆ. ಅದನ್ನು ಬಿಟ್ಟು ಅವರ ವೈಯುಕ್ತಿಕವಾಗಿ ಇರುವ ಸಮಸ್ಯೆಯಿಂದಾಗಿ ಕೃಷಿ‌ ಕುರಿತು ಏನೇನೋ‌ ಹೇಳುತ್ತಿದ್ದಾರೆ. ಕಾನೂನುನ್ನು ಜಯಿಸುವಷ್ಟು ಬುದ್ಧಿವಂತ ಅವರು. ನಿಮಗೆ ಸಮಸ್ಯೆ ಬಂದಿದ್ದಾಗ ಅದು ಅರ್ಥ ಆಗಿದೆ ಎಂದು ಟಾಂಗ್ ಕೊಟ್ಟರು.

ಸೀಟು ಹಂಚಿಕೆ ಮಾತುಕತೆ ನಡೆದಿಲ್ಲ:

ಮಂಡ್ಯ ಅಥವ ರಾಜ್ಯದ ಯಾವುದೇ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಸೀಟು ಕುರಿತು ಮಾತುಕತೆ ಆಗಿಲ್ಲ. ಅದಕ್ಕೆ ಇನ್ನೂ ಸಮಯ ಇದೆ. ಬಿಜೆಪಿಯೊಂದಿಗೆ ಪರಸ್ಪರ ಮಾತಿನ ಮೂಲಕ ಎಲ್ಲವನ್ನು ತೀರ್ಮಾನ ಕೈಗೊಳ್ಳುತ್ತೇವೆ. ನಮ್ಮ ಮೊದಲ ಆದ್ಯತೆ ಜಿಲ್ಲಾ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆ ಗಮನ ನೀಡಿದ್ದೇವೆ ಎಂದು ಕೇಂದ್ರ ಸಚಿವರು ಹೇಳಿದರು.

ಸಂಸದರಾದ ಮಲ್ಲೇಶ್ ಬಾಬು, ಶಾಸಕರಾದ ಜಿ.ಕೆ. ವೆಂಕಟಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್, ಇಂಚರ ಗೋವಿಂದರಾಜು, ಮೇಲೂರು ರವಿ, ಮಾಜಿ ಶಾಸಕರಾದ ಚೌಡರೆಡ್ಡಿ ತೂಪಲ್ಲಿ, ಹೆಚ್.ಎಂ. ರಮೇಶ್ ಗೌಡ, ಡಾ. ಕೆ.ಅನ್ನದಾನಿ ಮುಂತಾದವರು ಹಾಜರಿದ್ದರು.

Watch Video: ಸಾಗರದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕನಿಗೆ ಬಿತ್ತು ಸಖತ್ ಗೂಸಾ

SHOCKING: ಮನೆಯಲ್ಲೇ ನನ್ನನ್ನು ಯಾರೂ ಕೇಳಲ್ಲ, ನೀವ್ಯಾರು ಕೇಳೋಕೆ?: ಶಿಕ್ಷಕಿಗೆ ಕಪಾಳಮೋಕ್ಷ ಮಾಡಿದ ವಿದ್ಯಾರ್ಥಿ

Share. Facebook Twitter LinkedIn WhatsApp Email

Related Posts

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

2 Mins Read

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

1 Min Read

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

1 Min Read
Recent News

BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!

Too much sex: ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ? ತಜ್ಞರ ಮಾಹಿತಿ ಇಲ್ಲಿದೆ

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

Sleep Expert: ‘ಲವ್‌ಮೇಕಿಂಗ್‌’ಗೆ ಬೆಸ್ಟ್ ಟೈಮ್ ಯಾವುದು? ಇಲ್ಲಿದೆ ವೈಜ್ಞಾನಿಕ ಮಾಹಿತಿ!

State News
KARNATAKA

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್ (KSBC) ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ…

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

BREAKING: ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, ಈ ಎಲ್ಲವೂ ನಿಷೇಧ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.