ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಂಧ್ರ ಮತ್ತು ಮಹಾರಾಷ್ಟ್ರ ಅಡ್ಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಧಿಸೂಚನೆಗೆ ಒಮ್ಮೆ ಆಂಧ್ರ ಪ್ರದೇಶ ಮತ್ತೊಮ್ಮೆ ಮಹಾರಾಷ್ಟ್ರದವರು ಕೇಂದ್ರದ ಮೇಲೆ ಒತ್ತಡ ತಂದು ನಿಲ್ಲಿಸಿದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಪಿ.ಎಚ್.ಪೂಜಾರ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆಯ ಪ್ರಗತಿಯ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದರು. “ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರು ಈ ಯೋಜನೆಯ ಪರವಾಗಿದ್ದು, ಇದಕ್ಕೆ ಅಧಿಸೂಚನೆ ಹೊರಡಿಸಲೇಬೇಕು ಎಂದು ಸಂಬಂಧಪಟ್ಟ ರಾಜ್ಯಗಳ ಸಭೆ ನಡೆಸಲು ಎರಡು ಬಾರಿ ಪ್ರಯತ್ನಿಸಿದರು. ಆದರೆ … Continue reading ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಂಧ್ರ ಮತ್ತು ಮಹಾರಾಷ್ಟ್ರ ಅಡ್ಡಿ: ಡಿಸಿಎಂ ಡಿ.ಕೆ.ಶಿವಕುಮಾರ್