ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವರಿಷ್ಠರ ಮನವೊಲಿಕೆಗೂ ಬಗ್ಗದೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಕಣಕ್ಕೆ ಇಳಿದಿದ್ದರು. ಇದೀಗ ಅವರಿಗೆ ಬಿಜೆಪಿ ಶಾಕ್ ನೀಡಿದೆ. ಅದೇ ಬಿಜೆಪಿ ಪಕ್ಷದಿಂದ 6 ವರ್ಷ ಉಚ್ಛಾಟನೆ ಮಾಡಿ ಆದೇಶಿಸಿದೆ.
ಈ ಕುರಿತಂತೆ ಇಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ ಎಂಬುದಾಗಿ ಕೆ.ಎಸ್ ಈಶ್ವರಪ್ಪಗೆ ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿದಂ ಉಚ್ಚಾಟಿಸಲಾಗಿದೆ ಎಂದಿದ್ದಾರೆ.