ಶಿವಮೊಗ್ಗ : ಮೇ 7 ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಕಣದಲ್ಲಿ ಉಳಿಯುವ ಮೂಲಕ ಪಕ್ಷದ ವಿರುದ್ಧ ಬಂಡಾಯದ ಸಮರಕ್ಕೆ ಸನ್ನದ್ಧರಾಗಿದ್ದೇನೆಂಬ ಸಂದೇಶವನ್ನು ಮಾಜಿ ಸಿಎಂ ಯಡಿಯೂರಪ್ಪ ಕುಟುಂಬ ಮತ್ತು ಬಂದ ಬಿಜೆಪಿ ಹೈಕಮಾಂಡ್ ಗೆ ರವಾನಿಸಿದ್ದಾರೆ.
ನಾಮಪತ್ರ ಹಿಂತೆಗೆತಕ್ಕೆ ಇಂದು ಅಂತಿಮ ದಿನವಾಗಿದ್ದು ಈಶ್ವರಪ್ಪ ನಾಮಪತ್ರ ಹಿಂತೆದುಕೊಂಡಿಲ್ಲ.
ಇಂದು ಸಹ ಈಶ್ವರಪ್ಪನವರು ಯಡಿಯೂರಪ್ಪ ಕುಟುಂಬದ ವಿರುದ್ಧ ತಮ್ಮ ಪ್ರಚಾರ ಸಭೆಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ. 2013 ರ ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಕೆಜೆಪಿ ಕಟ್ಟಿ ಅದರಿಂದ ರುದ್ರೇಗೌಡರನ್ನು ಕಣಕ್ಕಿಳಿಸಿ ಈಶ್ವರಪ್ಪ ಸೋಲಿಗೆ ಕಾರಣರಾಗಿದ್ದರು. ಈಗ ಈಶ್ವರಪ್ಪ ಬಿಜೆಪಿ ಅಧಿಕೃತ ಅಭ್ಯರ್ಥಿ ಹಾಗೂ ಯಡಿಯೂರಪ್ಪ ಪುತ್ರ ರಾಘವೇಂದ್ರರನ್ನು ಪರಾಭವಗೊಳಿಸಿ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ.
ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಅಂತಿಮ ಕಣದಲ್ಲಿ 23 ಅಭ್ಯರ್ಥಿಗಳು
ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ.ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ, ಬಹುಜನ ಸಮಾಜ ಪಾರ್ಟಿಯಿಂದ ಎ.ಡಿ.ಶಿವಪ್ಪ, ಯಂಗ್‍ಸ್ಟರ್ ಎಂಪರ್‍ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ರವಿಕುಮಾರ್ ಎಸ್, ಶಿವರುದ್ರಯ್ಯ ಸ್ವಾಮಿ, ಹೆಚ್ ಸುರೇಶ್ ಪೂಜಾರಿ, ಚಂದ್ರಶೇಖರ್ ಹೆಚ್.ಸಿ, ಜಾನ್ ಬೆನ್ನಿ, ಪಿ.ಶ್ರೀಪತಿ, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಹನುಮಂತಪ್ಪ, ಜಿ.ಜಯದೇವ, ಎನ್.ವಿ.ನವೀನ್ ಕುಮಾರ್, ಗಣೇಶ್.ಬಿ, ಕುಣಜೆ ಮಂಜುನಾಥ ಗೌಡ ಇವರುಗಳು ಅಂತಿಮವಾಗಿ ಕಣದಲ್ಲಿದ್ದಾರೆ.
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ