ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರಿಗೆ ಮಾನ ಮರ್ಯಾದೆ ಇದ್ದರೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಈಶ್ವರಪ್ಪ ಸವಾಲ್ ಹಾಕಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು ಇಲ್ಲದಿದ್ದರೆ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸವಾಲು ಹಾಕಿದರು. ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದವರ ವಿರುದ್ಧ ಕಿಡಿಕಾರಿದರು.
ದೇಶದ ರಾಜಕೀಯ ವ್ಯವಸ್ಥೆಯಲ್ಲಿ ವಿವಿಧ ಅಧಿಕಾರ ಹೊಂದಿರುವವರು ಅವರವರ ಇತಿಮಿತಿಗಳಲ್ಲಿ ನಡೆದುಕೊಳ್ಳಬೇಕ, . ಸಿದ್ದರಾಮಯ್ಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ತಪ್ಪು. ಪಕ್ಷದ ಚುನಾವಣಾ ಸಮಿತಿ ಆಯ್ಕೆ ಮಾಡಿ ನಂತರ ಅಭ್ಯರ್ಥಿಗಳ ಘೋಷಣೆ ಮಾಡಲಾಗುತ್ತದೆ. ಸಿದ್ದರಾಮಯ್ಯ 224 ಕ್ಷೇತ್ರಗಳಲ್ಲೂ ಕೂಡ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿ ಎಂದು ವಾಗ್ಧಾಳಿ ನಡೆಸಿದರು.
BREAKING NEWS : ದತ್ತು ಮಕ್ಕಳು ಅನುಕಂಪದ ಆಧಾರದ ಉದ್ಯೋಗಕ್ಕೆ ಅರ್ಹರು : ಹೈಕೋರ್ಟ್ ಮಹತ್ವದ ಆದೇಶ