ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಎ ಮತ್ತು ಗ್ರೂಪ್-ಬಿ ಉಳಿಕೆ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದು,ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಎಂಕಾಂ, ಎಂಬಿಎ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅಥವಾ ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಅಸೋಸಿಯೇಟ್ ಸದಸ್ಯರು ಅರ್ಜಿ ಸಲ್ಲಿಸಲು ಅರ್ಹರು.
ʻCAAʼ ಜಾರಿ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ ʻDYFIʼ ,ʻIUMLʼ | Petition Against CAA
ನಾಲ್ಕು ವರ್ಷಗಳ ನಂತರ, ಕೋವಿಡ್ ವೈರಸ್ ಸಾಮಾನ್ಯ ಜ್ವರವಾಗಲಿದೆ: ಅಧ್ಯಯನ
ʻCAAʼ ಜಾರಿ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ ʻDYFIʼ ,ʻIUMLʼ | Petition Against CAA
ಮಕ್ಕಳ ಅಶ್ಲೀಲ ಚಿತ್ರಗಳ ಮೇಲಿನ ಮದ್ರಾಸ್ ಹೈಕೋರ್ಟ್ ತೀರ್ಪು ಕ್ರೂರವಾಗಿದೆ: ಸುಪ್ರೀಂ ಕೋರ್ಟ್
ವಯೋಮಿತಿ, ವೇತನ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿ ನಿಗದಿಪಡಿಸಿದ್ದು, ಮೀಸಲಾತಿ ಅಭ್ಯರ್ಥಿಗಳಿಗೆ ವಯೋಸಡಿಲಿಕ ಅನ್ವಯವಾಗಲಿದೆ. ಹುದ್ದೆಗಳಿಗೆ ಅನುಗುಣವಾಗಿ 43,100 ರೂ.ನಿಂದ 83,900 ರೂ. ಮಾಸಿಕ ವೇತನ ಪಾವತಿಸಲಾಗುತ್ತದೆ. ಅರ್ಜಿ ಸಲ್ಲಿಕೆ, ಶುಲ್ಕ: ಕೆಪಿಎಸ್‌ಸಿ ಅಧಿಕೃತ https://kpsconline. karnataka.gov.in ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ಸಾಮಾನ್ಯ ಅಭ್ಯರ್ಥಿಗಳು 600 ಒಬಿಸಿ-300 ರೂ. ಅರ್ಜಿಶುಲ್ಕ ಪಾವತಿಸಬೇಕು. ಆಯ್ಕೆ ಪ್ರಕ್ರಿಯೆ: ಪೂರ್ವಭಾವಿ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಏರ್ಪಡಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ವಯಸ್ಸಿನ ಅರ್ಹತೆಗಳು
ಕನಿಷ್ಠ 21 ವರ್ಷ ವಯಸ್ಸಾಗಿರಬೇಕು.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.
ಆಯ್ಕೆ ಪ್ರಕ್ರಿಯೆಯ ಪ್ರಮುಖ ದಿನಾಂಕಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 18-03-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-04-2024
ಪೂರ್ವಭಾವಿ ಪರೀಕ್ಷಾ ದಿನಾಂಕ : 02-06-2024 (ಸಂಭಾವ್ಯ ದಿನಾಂಕ)