Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಹನ ಸವಾರರೇ ಎಚ್ಚರ : ಇನ್ಮುಂದೆ ಈ ತಪ್ಪು ಮಾಡಿದರೆ ನಿಮ್ಮ ಡಿಎಲ್ (DL) ತಕ್ಷಣ ರದ್ದು !

26/02/2026 12:46 PM

ಕರಾವಳಿ ಜನತೆಗೆ ರೈಲ್ವೆ ಬಂಪರ್ ಕೊಡುಗೆ: ಮಾ. 1 ರಂದು ಮಂಗಳೂರು-ರಾಮೇಶ್ವರಂ ಅಮೃತ್ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ!

26/02/2026 12:44 PM

BREAKING : ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಪ್ರಕರಣ : 11 ಆರೋಪಿಗಳು ಅರೆಸ್ಟ್!

26/02/2026 12:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ
KARNATAKA

ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

By kannadanewsnow0902/04/2025 4:43 PM

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54 ಕೋಟಿ ಹೆಚ್ವು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಮತ್ತು ಕೆಎಸ್ ಡಿಎಲ್ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಜಂಟಿ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಈ ಬಗ್ಗೆ ಬುಧವಾರ ಮಾಹಿತಿ ನೀಡಿರುವ ಸಚಿವರು, ಕಳೆದ ಹಣಕಾಸು ವರ್ಷದಲ್ಲಿ ಸಂಸ್ಥೆಯು 43,144 ಮೆಟ್ರಿಕ್ ಟನ್ ಸಾಬೂನು ಮತ್ತು ಮಾರ್ಜಕಗಳನ್ನು ಮಾರಾಟ ಮಾಡಿ, ದಾಖಲೆಯ ಲಾಭ ಗಳಿಸಿದೆ. ಲಾಭದಲ್ಲಿ ನಿಯಮಾನುಸಾರ ಶೇ.30ರಷ್ಟನ್ನು, ಅಂದರೆ ₹123 ಕೋಟಿಯನ್ನು ಸರಕಾರಕ್ಕೆ ಹಸ್ತಾಂತರಿಸಲಾಗುವುದು
ಎಂದಿದ್ದಾರೆ.

ಸಂಸ್ಥೆಯು 2023-24ರಲ್ಲಿ 37,916 ಟನ್ ಉತ್ಪನ್ನ ಮಾರಾಟ ಮಾಡಿ, 1,570 ಕೋಟಿ ರೂಪಾಯಿ ವಹಿವಾಟು ನಡೆಸುವ ಮೂಲಕ 362 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿತ್ತು. ಆ ಪೈಕಿ 108 ಕೋಟಿ ರೂ.ಗಳನ್ನು ಸರಕಾರಕ್ಕೆ ಕೊಡಲಾಗಿತ್ತು. ಹಿಂದೆ ಸಂಸ್ಥೆಯು ಲಾಭಾಂಶ ಕೊಡುವ ಸರಕಾರಿ ಉದ್ದಿಮೆಗಳ ಪೈಕಿ 21ನೇ ಸ್ಥಾನದಲ್ಲಿತ್ತು. ಈಗ 3ನೇ ಸ್ಥಾನದಲ್ಲಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

2024-25ರಲ್ಲಿ ಸಂಸ್ಥೆಯು ಉತ್ಪಾದನೆ, ಮಾರಾಟ ಮತ್ತು ಲಾಭ ಮೂರರಲ್ಲೂ ಸಾರ್ವಕಾಲಿಕ ದಾಖಲೆ ಬರೆದಿದೆ.‌ ಕಳೆದ ಸಾಲಿನಲ್ಲಿ ರಫ್ತು ವಹಿವಾಟಿನ ಮೂಲಕವೂ ಕೆಎಸ್ಡಿಎಲ್ 23.2 ಕೋಟಿ ರೂಪಾಯಿ ಮೊತ್ತದ ವಹಿವಾಟು ನಡೆಸಿದೆ ಎಂದು ಸಚಿವ ಪಾಟೀಲ ವಿವರಿಸಿದ್ದಾರೆ.

ಸಂಸ್ಥೆಯು ಗ್ರಾಹಕರ ನಿರೀಕ್ಷೆಗೆ ತಕ್ಕಂತೆ 19 ಉತ್ಪನ್ನಗಳನ್ನು ಒಳಗೊಂಡಿದೆ. ಇದರಲ್ಲಿ ಮೈಸೋಪು, ಹ್ಯಾಂಡ್ ವಾಶ್, ಶವರ್ ಜೆಲ್, ಕುಡಿಯುವ ನೀರು, ಅಗರಬತ್ತಿ ಮುಂತಾದ ಉತ್ಕೃಷ್ಟ ಉತ್ಪನ್ನಗಳನ್ನು ಹೊಂದಿದೆ. ಮಾರುಕಟ್ಟೆ ವಿಸ್ತರಣೆ ಮತ್ತು ದಕ್ಷ ಉತ್ಪಾದನಾ ವಿಧಾನದ ಮೂಲಕ ಲಾಭವನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಸಂಸ್ಥೆಯು ಈಗ ಇ-ಕಾಮರ್ಸ್ ಮತ್ತು ಆಧುನಿಕ ವ್ಯಾಪಾರ ಮಾದರಿಗಳನ್ನು ಅಳವಡಿಸಿಕೊಂಡಿದೆ. ಸಂಸ್ಥೆಯ ಚೆನ್ನೈ, ಹೈದರಾಬಾದ್, ಮುಂಬೈ, ಅಹಮದಾಬಾದ್, ದೆಹಲಿ, ಛತ್ತೀಸಗಢ ಮತ್ತು ಕೋಲ್ಕತಾ ಹಾಗೂ ಒಡಿಶಾ ಶಾಖೆಗಳಲ್ಲಿ ಕೂಡ ವಹಿವಾಟು ಹೆಚ್ಚಳ ಕಂಡಿದೆ ಎಂದು ಅವರು ನುಡಿದಿದ್ದಾರೆ.

ಸಂಸ್ಥೆಯಲ್ಲಿ ಈಗ ಮೂರು ಪಾಳಿಗಳ ಕೆಲಸದ ವ್ಯವಸ್ಥೆ ಇದೆ. ವಿಜಯಪುರದಲ್ಲಿ 250 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಸ್ಥೆಯ ಘಟಕವನ್ನು ತೆರೆಯಲಾಗುವುದು.‌ ಇದಕ್ಕೆ 50 ಎಕರೆ ಜಾಗವನ್ನು ಕೆಐಎಡಿಬಿ ಹಂಚಿಕೆ ಮಾಡಿದೆ. 2025-26ರಲ್ಲಿ ಸಂಸ್ಥೆಯು 1,819 ಕೋಟಿ ರೂಪಾಯಿ ಮೊತ್ತದ ವಹಿವಾಟು ನಡೆಸುವ ಗುರಿ ಹೊಂದಿದೆ ಎಂದು ಪಾಟೀಲ ಹೇಳಿದ್ದಾರೆ.

ಕೆಎಸ್ ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪಿ.ಕೆ.ಎಂ.ಪ್ರಶಾಂತ ಅವರು ಮಾತನಾಡಿ, ಕಳೆದ ಎರಡು ವರ್ಷಗಳಿಂದ ಸಂಸ್ಥೆಯ ಲಾಭದ ಪ್ರಮಾಣ ಏರುಮುಖವಾಗಿದೆ. ಪಾರದರ್ಶಕತೆ, ದಕ್ಷತೆ, ಮಾರುಕಟ್ಟೆ ವಿಸ್ತರಣೆ ಮತ್ತು ಗುಣಮಟ್ಟ ಈ‌ ‌ನಾಲ್ಕು ಅಂಶಗಳಿಗೆ ಆದ್ಯತೆ ನೀಡಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದರು.

ಸಂಸ್ಥೆಯ ಸಾಬೂನು ಘಟಕವು ಕಳೆದ ಸಾಲಿನಲ್ಲಿ 36,268 ಟನ್, ಡಿಟರ್ಜೆಂಟ್ ಘಟಕವು 5,788 ಟನ್ ಮತ್ತು ಸೌಂದರ್ಯ ವರ್ಧಕಗಳ ಘಟಕವು 1,087 ಟನ್ ಉತ್ಪನ್ನಗಳನ್ನು ತಯಾರಿಸಿದೆ ಎಂದು ಅವರು ಹೇಳಿದ್ದಾರೆ.

BREAKING : ‘ಮುಡಾ’ ಕೇಸ್ ನಲ್ಲಿ ಸಿಎಂಗೆ ಮತ್ತೆ ಸಂಕಷ್ಟ : ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ತಕರಾರು ಅರ್ಜಿ ಸಲ್ಲಿಸಿದ ‘ED’

BREAKING: ಬಿಸಿಲಿನ ತಾಪಮಾನ ಹಿನ್ನಲೆ: ರಾಜ್ಯ ಸರ್ಕಾರದಿಂದ ‘ಸರ್ಕಾರಿ ಕಚೇರಿ’ ಕೆಲಸದ ಸಮಯ ಬದಲಿಸಿ ಆದೇಶ

Share. Facebook Twitter LinkedIn WhatsApp Email

Related Posts

ವಾಹನ ಸವಾರರೇ ಎಚ್ಚರ : ಇನ್ಮುಂದೆ ಈ ತಪ್ಪು ಮಾಡಿದರೆ ನಿಮ್ಮ ಡಿಎಲ್ (DL) ತಕ್ಷಣ ರದ್ದು !

26/02/2026 12:46 PM1 Min Read

BREAKING : ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಪ್ರಕರಣ : 11 ಆರೋಪಿಗಳು ಅರೆಸ್ಟ್!

26/02/2026 12:41 PM1 Min Read

ರೈತರಿಗೆ ಬಂಪರ್ ಕೊಡುಗೆ: ಟ್ರ್ಯಾಕ್ಟರ್ ಖರೀದಿಗೆ ಶೇ. 50 ರಷ್ಟು ಸಬ್ಸಿಡಿ! ಅರ್ಜಿ ಸಲ್ಲಿಕೆ ಹೇಗೆ?

26/02/2026 12:33 PM2 Mins Read
Recent News

ವಾಹನ ಸವಾರರೇ ಎಚ್ಚರ : ಇನ್ಮುಂದೆ ಈ ತಪ್ಪು ಮಾಡಿದರೆ ನಿಮ್ಮ ಡಿಎಲ್ (DL) ತಕ್ಷಣ ರದ್ದು !

26/02/2026 12:46 PM

ಕರಾವಳಿ ಜನತೆಗೆ ರೈಲ್ವೆ ಬಂಪರ್ ಕೊಡುಗೆ: ಮಾ. 1 ರಂದು ಮಂಗಳೂರು-ರಾಮೇಶ್ವರಂ ಅಮೃತ್ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ!

26/02/2026 12:44 PM

BREAKING : ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಪ್ರಕರಣ : 11 ಆರೋಪಿಗಳು ಅರೆಸ್ಟ್!

26/02/2026 12:41 PM

ರೈತರಿಗೆ ಬಂಪರ್ ಕೊಡುಗೆ: ಟ್ರ್ಯಾಕ್ಟರ್ ಖರೀದಿಗೆ ಶೇ. 50 ರಷ್ಟು ಸಬ್ಸಿಡಿ! ಅರ್ಜಿ ಸಲ್ಲಿಕೆ ಹೇಗೆ?

26/02/2026 12:33 PM
State News
KARNATAKA

ವಾಹನ ಸವಾರರೇ ಎಚ್ಚರ : ಇನ್ಮುಂದೆ ಈ ತಪ್ಪು ಮಾಡಿದರೆ ನಿಮ್ಮ ಡಿಎಲ್ (DL) ತಕ್ಷಣ ರದ್ದು !

By kannadanewsnow5726/02/2026 12:46 PM KARNATAKA 1 Min Read

ಬೆಂಗಳೂರು: ನೀವು ರಸ್ತೆಯಲ್ಲಿ ಸಂಚರಿಸುವಾಗ ಪೊಲೀಸರು ಇಲ್ಲ ಎಂದು ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದೀರಾ? ಹಾಗಿದ್ದರೆ ಇಂದೇ ಎಚ್ಚೆತ್ತುಕೊಳ್ಳಿ. ಇನ್ನು ಮುಂದೆ…

BREAKING : ಬೆಂಗಳೂರಲ್ಲಿ ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಪ್ರಕರಣ : 11 ಆರೋಪಿಗಳು ಅರೆಸ್ಟ್!

26/02/2026 12:41 PM

ರೈತರಿಗೆ ಬಂಪರ್ ಕೊಡುಗೆ: ಟ್ರ್ಯಾಕ್ಟರ್ ಖರೀದಿಗೆ ಶೇ. 50 ರಷ್ಟು ಸಬ್ಸಿಡಿ! ಅರ್ಜಿ ಸಲ್ಲಿಕೆ ಹೇಗೆ?

26/02/2026 12:33 PM

SHOCKING : ಕೋತಿ ಅಡ್ಡ ಬಂತೆಂದು ಸಡನ್ ಬ್ರೇಕ್ ಹಾಕಿದಕ್ಕೆ ಆಟೋ ಪಲ್ಟಿ : ಕಾರು ಡಿಕ್ಕಿಯಾಗಿ ಚಾಲಕ ಸಾವು!

26/02/2026 12:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.