ಬೆಂಗಳೂರು: ರಾಜ್ಯದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸುಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ(ರಿ)ದಿಂದ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಲಾಗಿದೆ.
ಭಾರತೀಯ ಮಜ್ದೂರ್ ಸಂಘದೊಂದಿಗೆ ಸಂಯೋಜಿತ(ಬಿಎಂಎಸ್) ನಿಂದ ರಾಜ್ಯದ ಜನತೆಗೆ 70ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘ (KSHCOEA BMS) ಸಂಘದ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳು ಕೋರಿದ್ದಾರೆ.

ಅಂದಹಾಗೇ ರಾಜ್ಯದ ಆರೋಗ್ಯ, ವೈದ್ಯಕೀಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಕಷ್ಟಗಳಿಗೆ, ಸಮಸ್ಯೆಗಳಿಗೆ ಪರಿಹರಿಸುವ ಕೆಲಸ ಮಾಡುತ್ತಿರುವಂತ ಮುಂಚೂಣಿಯ ಸಂಘಟನೆ KSHCOEA BMS ಆಗಿದೆ. ಈ ಸಂಘದಿಂದಾಗಿ ಆರೋಗ್ಯ, ವೈದ್ಯಕೀಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಹೆಚ್ಚಳ, ಆರೋಗ್ಯ ವಿಮಾ ಸೌಲಭ್ಯ ಸೇರಿದಂತೆ ವಿವಿಧ ಸೇವಾ ಭದ್ರತೆಯನ್ನು ನೌಕರರಿಗೆ ಒದಗಿಸಿಕೊಡುವಂತ ಕೆಲಸವನ್ನು ಹಗಲಿರುಳೆನ್ನದೆ ಮಾಡುತ್ತಿದೆ.
ಇಂದು ಕನ್ನಡಿಗರು ಎಲ್ಲಾ ಕ್ಷೇತ್ರಗಳಲ್ಲಿಯೂ ಅದ್ವಿತೀಯ ಸಾಧನೆ ಮಾಡುತ್ತಿದ್ದಾರೆ: ಸಾಗರ AC ವೀರೇಶ್ ಕುಮಾರ್
BIG BREAKING: ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್: ಸಿ.ಎಂ.ಸಿದ್ದರಾಮಯ್ಯ ಘೋಷಣೆ







