ಹಾಸನ: ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪು ಮರಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದೆ. ಈ ಭೀಕರ ಅಪಘಾತದಲ್ಲಿ ಬಸ್ಸಿನಲ್ಲಿದ್ದಂತ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದು ಬಂದಿದೆ.
ಹಾಸನ ಜಿಲ್ಲೆಯ ಅರಸೀಕೆರೆಯ ಗೀಜಿಹಳ್ಳಿ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಪುತ್ತೂರು ಡಿಪೋ ಬಸ್ ಮಡಿಕೇರಿ ಕಡೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಮರಕ್ಕೆ ಬಸ್ ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಕೆ ಎಸ್ ಆರ್ ಟಿ ಸಿ ಬಸ್ ಅಪಘಾತದಲ್ಲಿ ಗಾಯಗೊಂಡಿರುವಂತ ಗಾಯಾಳುಗಳನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರು, ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ALERT : `ಮಧುಮೇಹ’ದಿಂದ ಹೃದಯಾಘಾತ, ಪಾರ್ಶ್ವವಾಯು ಸೇರಿ ಈ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!








