ಬೆಂಗಳೂರು: ಸರ್ಕಾರಿ ನೌಕರರು ಯಾವುದೇ ಪಕ್ಷದ ಪರ ಅಥಾವ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಬಾರದು ಎನ್ನುವ ನಿಯಮವಿದ್ದರು ಕೂಡ ಕೆಎಸ್‌ಆರ್‌ಟಿಸಿ ಬಸ್ ಚಾಲಕನೊಬ್ಬ ಕರ್ತವ್ಯ ಸಮಯದಲ್ಲಿ ಪಕ್ಷದ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿರುವ ಘಟನೆ ನಡೆದಿದೆ.
ಬಾಗೇಪಲ್ಲಿ ಘಟಕದ ಚಾಲಕನೊಬ್ಬರು ಕನ್ನಡದ ವಾಹಿನಿಯಿಂದಕ್ಕೆ ನೀಡಿರುವ ಹೇಳಿಕೆಯಲ್ಲಿ ಪಕ್ಷವೊಂದ ಪರ ಅಭಿಪ್ರಾಯ ವ್ಯಕ್ತಪಡಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಇನ್ನೂ ಸರ್ಕಾರಿ ಅಧಿಕಾರಿಗಳು/ನೌಕರರು ಯಾವುದೇ ಕಾರಣಕ್ಕೂ ಕೂಡ ಈ ರೀತಿ ಹೇಳಿಕೆಗಳನ್ನು ನೀಡಬಾರದು ಅಂತ ನಿಯಮ ವಿದ್ದರು ಕೂಡ ನಿಯಮ ಬಾಹಿರವಾಗಿ ಹೇಳಿಕೆ ನೀಡುತ್ತಿರುವುದು ಯಾಕೆ ಎನ್ನುವುದು ಈಗ ವಿವಾದಕ್ಕೆ ಕಾರಣವಾಗಿದೆ. ಮುಂದೆ ಇಲಾಖೆ ಯಾವ ರೀತಿಯಲ್ಲಿ ತೀರ್ಮಾನ ಕೈಗೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.