ಬೆಂಗಳೂರು: ಸಾರಿಗೆ ಬಸ್ ಚಾಲನೆಯ ವೇಳೆಯಲ್ಲೇ ಚಾಲಕನಿಗೆ ಫಿಟ್ಸ್ ಬಂದ ಕಾರಣ, ಸರಣಿ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿದ್ದರೇ, ಅನೇಕ ವಾಹನಗಳು ಜಖಂಗೊಂಡಿವೆ.
ನೆಲಮಂಗಲ ಡಿಪೋ, ಚಿತ್ರದುರ್ಗ ವಿಭಾಗಕ್ಕೆ ಸೇರಿದ್ದಂತ ಕೆ ಎಸ್ ಆರ್ ಟಿಸಿ ಬಸ್ ಪಾವಗಡ ಟು ಬೆಂಗಳೂರಿಗೆ ಸಂಚರಿಸುತ್ತಿದ್ದಾಗ ಮಡಕಶಿರ ಬಳಿಯಲ್ಲಿ ಚಾಲಕನಿಗೆ ಫಿಟ್ಸ್ ಬಂದಿದೆ. ಹೀಗಾಗಿ ಸರಣಿ ಅಪಘಾತಕ್ಕೆ ಕಾರಣವಾಗಿದೆ.
ರಸ್ತೆ ಪಕ್ಕ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿಯಾದ ಪರಿಣಾಮ ಓರ್ವ ರೈತ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಒಂದು ಗೂಡ್ಸ್ ಆಟೋ, ಬೈಕ್ ಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾದ ಪರಿಣಾಮ ಜಖಂಗೊಂಡಿದ್ದಾವೆ. ಈ ಸಂಬಂಧ ಮಡಕಶಿರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸ ವರ್ಷಾಚರಣೆ ವೇಳೆ ದುರ್ವರ್ತನೆ ತೋರಿದರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ
ಡಿ.31ರಂದು ಅಲ್ಲಿ ಇಲ್ಲಿ ಯಾಕೆ? ‘ಫ್ಯಾಮಿಲಿ ಸಹಿತ’ ಇಲ್ಲಿಗೆ ಹೋಗಿ, ಹೊಸ ವರ್ಷಾಚರಣೆ ಮಾಡಿ