ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿ ಬಸ್ ಪಲ್ಟಿಯಾಗಿ ಮನೆಯ ಮೇಲೆ ಉರುಳಿ ಬಿದ್ದಿರುವಂತ ಘಟನೆ ಬಾಳೆಹೊನ್ನೂರು ಸಮೀಪದ ಮೂರುಗದ್ದೆಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ಜಯಪುರ ಸಮೀಪದ ಮೂರುಗದ್ದೆ, ಜಲದುರ್ಗ ನಡುವೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಪುಟ್ಟಪ್ಪ ಪೂಜಾರಿ ಎಂಬುವರ ಮನೆಯ ಮೇಲೆ ಉರುಳಿ ಬಿದ್ದ ಪರಿಣಾಮ ಬಸ್ಸಿನಲ್ಲಿದ್ದಂತ 30 ಜನರಿಗೆ ಗಾಯಗೊಂಡಿದ್ದಾರೆ.
ಬೆಂಗಳೂರು ಡಿಪೋಗೆ ಸೇರಿದಂತ ಬಸ್ ಇದಾಗಿದ್ದು, ಈ ಬಸ್ಸಿನಲ್ಲಿ 45 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇವರಲ್ಲಿ 30 ಜನರಿಗೆ ಗಾಯವಾಗಿದ್ದು, 10 ಪ್ರಯಾಣಿಕರಿಗೆ ಜಯಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಚಾಲಕ ವೆಂಕಪ್ಪ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆ ಎಸ್ ಆರ್ ಟಿಸಿ ಚಾಲಕನ ಅತಿ ವೇಗದ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಬಸ್ ಮನೆಯ ಮೇಲೆ ಉರುಳಿ ಬಿದ್ದ ಪರಿಣಾಮ ಮನೆಯಲ್ಲಿದ್ದಂತ ಶಾಂತ ಎಂಬುವರಿಗೂ ಗಾಯವಾಗಿದ್ದು, ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ.
BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ: ಬಿ ರಿಪೋರ್ಟ್ ಸಂಬಂಧಿಸಿದ ಆದೇಶ ಕಾಯ್ದಿರಿಸಿದ ಕೋರ್ಟ್
ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ತಪ್ಪದೇ ಇದನ್ನೊಮ್ಮೆ ಓದಿ.!
BREAKING : ಬೆಳಗಾವಿಯಲ್ಲಿ ಘೋರ ಘಟನೆ :ಕಾಲೇಜಿಗೆ ಹೋಗು ಅಂದಿದಕ್ಕೆ ನೇಣಿಗೆ ಶರಣಾದ ಯುವಕ!