ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ ಒಂದು ಪಲ್ಟಿಯಾಗಿರುವ ಘಟನೆ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದ ಬಳಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಬಸ್ ಚಾಲಕನ ಕಾಲು ಮುರಿದ್ದರೇ, ಹಲವರು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ರಾಜ್ಯದ ಎಲ್ಲ ರಂಗಗಳಲ್ಲಿ ಕನ್ನಡ ಬಳಕೆಗೆ ಕಾನೂನು ರಚನೆ – CM ಬಸವರಾಜ ಬೊಮ್ಮಾಯಿ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಬಳಿಯ ಆನೆದಿಂಬದ ಬಳಿಯಲ್ಲಿ ಇಂದು ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿ ಬಿದ್ದಿದೆ. ಬಸ್ ಪಲ್ಟಿಯಾದ ಪರಿಣಾಮ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ಕಾಲು ಮುರಿದಿರೋದಾಗಿ ತಿಳಿದು ಬಂದಿದೆ.
ಇನ್ನೂ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಂತ ಹಲವು ಪ್ರಯಾಣಿಕರಿಗೂ ಈ ಅಪಘಾತದಲ್ಲಿ ಗಾಯಗೊಂಡಿರೋದಾಗಿ ಹೇಳಲಾಗುತ್ತಿದೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಮಲೆಮಹದೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.