ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಿಂದ ಭಕ್ತರನ್ನು ಕರೆದುಕೊಂಡು ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣತಪ್ಪಿ ಹಳ್ಳಕ್ಕೆ ಇಳಿದಿದೆ.
BIGG NEWS: ಬೆಂಗಳೂರಿನಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಗಂಡನನ್ನೇ ಕೊಲೆ ಮಾಡಿದ ಪಾಪಿ ಹೆಂಡ್ತಿ
ಇದರಿಂದಾಗಿ 25 ಮಂದಿ ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಾಳಬೆಟ್ಟದ ಸಮೀಪ ನಡೆದಿದೆ.ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದಿದೆ. ಪರಿಣಾಮ 25 ಮಂದಿ ಗಾಯಗೊಂಡಿದ್ದಾರೆ. ಚಾಲಕ ಚಂದ್ರಶೇಖರ್ ಅವರಿಗೆ ಕೈ ಮತ್ತು ಹೊಟ್ಟೆ ಭಾಗಕ್ಕೆ ಗಾಯಗಳಾಗಿದ್ದು, ಕಂಡಕ್ಟರ್ಗೆ ಬೆನ್ನು ಮತ್ತು ಹೊಟ್ಟೆಗೆ ಪೆಟ್ಟಾಗಿದೆ. ಜೊತೆಗೆ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿಗೆ ರವಾನಿಸಲಾಗಿದೆ. ಗಾಯಗೊಂಡ ಇನ್ನುಳಿದ 21 ಮಂದಿಯನ್ನು ಕೊಳ್ಳೇಗಾಲ ಆಸ್ಪತ್ರೆಗೆ ಸಾಗಿಸಲಾಗಿದೆ.