ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ನಿಗಮವು ಬಿಗ್ ಶಾಕ್ ನೀಡಿದೆ. 3,851 ಮಂದಿಯಿಂದ ಬರೋಬ್ಬರಿ 6.21 ಲಕ್ಷ ದಂಡವನ್ನು ವಸೂಲಿ ಮಾಡಿದೆ.
ಈ ಕುರಿತು ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಆಗಸ್ಟ್ -2024 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43781 ವಾಹನಗಳನ್ನು ತನಿಖೆಗೊಳಪಡಿಸಿ 3692 ಪ್ರಕರಣಗಳನ್ನು ಪತ್ತೆಹಚ್ಚಿ, 3851 ಟಿಕೇಟ್ ರಹಿತ ಪ್ರಯಾಣಿಕರಿಂದ 6,21,383/- ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ ಎಂದಿದೆ.
ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 80,059/-ರೂ ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದು ತಿಳಿಸಿದೆ.
ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಕೋರಿದೆ.
BIG NEWS: ‘ಫೇಕ್ ನ್ಯೂಸ್’ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ: ಸಿಎಂ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ
ಬೆಂಗಳೂರಲ್ಲಿ ಹೆಚ್ಚಿದ ‘ನಿಫಾ’ ಭೀತಿ : ಓರ್ವ ವ್ಯಕ್ತಿಗೆ ಸೊಂಕಿನ ಗುಣಲಕ್ಷಣ ಪತ್ತೆ, 41 ಜನರಿಗೆ ‘ಹೋಮ್ ಕ್ವಾರಂಟೈನ್’!