ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ `KSRTC’ ಬಸ್ ಸಂಚಾರ ಆರಂಭ – Kannada News Now


State

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ `KSRTC’ ಬಸ್ ಸಂಚಾರ ಆರಂಭ

ಬೆಂಗಳೂರು : ಬಸ್ ಪ್ರಯಾಣಿಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇಂದಿನಿಂದ ರಾಜ್ಯಾದ್ಯಂತ ಕೆಎಸ್ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಂಟೇನ್ಮೆಂಟ್ ಹಾಗೂ ರೆಡ್ ಝೋನ್ ತಾಲುಕುಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಬಸ್ ಸಂಚಾರ ಆರಂಭಿಸಿಲು ಸಿಎಂ ಸಮ್ಮತಿ ನೀಡಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಹಾಟ್ ಸ್ಪಾಟ್ ಗಳನ್ನು ಗುರುತಿಸಿದೆ. ಕೊರೊನಾ ವೈರಸ್ ಇರುವ ತಾಲೂಕುಗಳಲ್ಲಿ ಮುಂದಿನ ಆದೇಶ ನೀಡುವವರೆಗೂ ಬಸ್ ಸಂಚಾರ ಇರುವುದಿಲ್ಲ  ಎಂದು ತಿಳಿಸಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರನ್ನು ತಮ್ಮ ಜಿಲ್ಲೆಗಳಿಗೆ ಕಳಿಸಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದ.ಈ ವೇಳೆ ಸಾಮಾಜಿಕ ಅಂತರ ಕಡ್ಡಾಯ ಪಾಲಿಸುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.