ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳದ ಕುರಿತಂತೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮಹತ್ವದ ಹೇಳಿಕೆ ನೀಡಿದ್ದು, ನಿಗಮಗಳಿಂದ ಪ್ರಸ್ತಾವನೆ ಬಂದ್ರೆ ದರ ಏರಿಕೆ ಬಗ್ಗೆ ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಸ್ ಪ್ರಯಾಣದರ ಹೆಚ್ಚಳ ಮಾಡಿ ನಾಲ್ಕು ವರ್ಷಗಳಾಗಿವೆ. ಹೀಗಾಗಿ ನಿಗಮಗಳಿಂದ ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆ ಬಂದ್ರೆ ದರ ಏರಿಕೆ ಕುರಿತು ಚರ್ಚೆ ನಡೆಸಿ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯದ ಸಾರಿಗೆ ನಿಗಮಗಳು ಪ್ರಯಾಣ ದರ ಹೆಚ್ಚಳದ ಪ್ರಸ್ತಾವನೆ ಸಲ್ಲಿಸಿದರೆ ಅದನ್ನು ಪರಿಶೀಲಿಸಿ, ಪ್ರಯಾಣ ದರ ಏರಿಕೆ ಮಾಡಬೇಕೆ ಅಥವಾ ಬೇಡವೇ ಎಂಬ ಬಗ್ಗೆ ತೀರ್ಮಾನಿಸುತ್ತೇವೆ. ಪ್ರಯಾಣ ದರ ಏರಿಕೆ ಮಾಡುವುದಕ್ಕೆ ಯಾವುದೇ ನಿಗದಿತ ಅವಧಿಯಿಲ್ಲ. ಪ್ರತಿ ವರ್ಷವೂ ಪ್ರಯಾಣ ದರ ಏರಿಕೆ ಮಾಡಬಹುದು. ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರಯಾಣ ದರ ಹೆಚ್ಚಿಸಲಾಗಿತ್ತು ಎಂದರು.