ಬೆಳಗಾವಿ : ಬೆಳಗಾವಿ ಗಡಿ ವಿವಾದದ ಹಿನ್ನೆಲೆ ಪರಿಸ್ಥಿತಿ ಉದ್ವಿಗ್ವವಾದ ಹಿನ್ನೆಲೆ ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ನಡುವೆ ಕಳೆದ 2 ದಿನದಿಂದ ಬಸ್ ಸಂಚಾರ ಸ್ಥಗಿತವಾಗಿತ್ತು.
ಇದೀಗ ಇಂದಿನಿಂದ ಎಂದಿನಂತೆ ಎರಡು ರಾಜ್ಯಗಳ ನಡುವೆ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಆರಂಭವಾಗಿದೆ. ಬೆಳಗಾವಿಯಿಂದ 400 ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ನಡುವೆ ಕೆ ಎಸ್ ಆರ್ ಟಿಸಿ ಬಸ್ ಸಂಚಾರ ಮತ್ತೆ ಆರಂಭವಾಗಿದೆ. ಚಿಕ್ಕೋಡಿಯಿಂದ ಸದ್ಯ 110 ಕೆಎಸ್ ಆರ್ ಟಿಸಿ ಬಸ್ ಸಂಚಾರ ಶುರುವಾಗಿದೆ. ಕಾಗವಾಡ, ನಿಪ್ಪಾಣಿ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಬಸ್ ತೆರಳಲಿದೆ.
ರಾಜ್ಯದಿಂದ ಮಹಾರಾಷ್ಟ್ರದ ವಿವಿಧ ನಗರ ಹಾಗೂ ಪಟ್ಟಣಗಳಿಗೆ ಬಸ್ ಸಂಚಾರ ಆರಂಭಗೊಂಡಿದೆ.ಬೆಳಗಾವಿ ಸೇರಿ ವಿವಿಧ ವಿಭಾಗಗಳ ಬಸ್ ಗಳನ್ನು ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದಿಂದ ಕೊಲ್ಹಾಪುರ, ನಾಸಿಕ್, ಮುಂಬೈ, ಪುಣೆ ಮತ್ತಿತರ ನಗರಗಳಿಗೆ ಸಂಚರಿಸುತ್ತಿದೆ. ಬೆಳಗಾವಿ ಗಡಿ ವಿವಾದ ತಾರಕಕ್ಕೇರಿದ ಪರಿಣಾಮ ಬುಧವಾರ ಬೆಳಗ್ಗೆಯಿಂದ ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ ಮತ್ತೆ ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರು ನಿರಾಳರಾಗಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕಿಚ್ಚು ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರು ಕರ್ನಾಟಕದ ವಾಹನಗಳಿಗೆ ಮತ್ತೆ ಮಸಿ ಬಳಿದು ಸಿಎಂ ಬೊಮ್ಮಾಯಿ ಭಾವಚಿತ್ರಕ್ಕೆ ಕೂಡ ಮಸಿ ಹಚ್ಚಿ ಪುಂಡಾಟ ಮೆರೆದಿದ್ದರು.ಈ ಹಿನ್ನೆಲೆ ಬೆಳಗಾವಿ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಹಿನ್ನೆಲೆ ಹೈ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿತ್ತು. ಇನ್ನೂ. ಬಸ್ ಸಂಚಾರ ಸ್ಥಗಿತವಾದ ಹಿನ್ನೆಲೆ ಪ್ರಯಾಣಿಕರು ಪರದಾಡಿದ್ದಾರೆ. ಮಹಾಪುಂಡರ ಪುಂಡಾಟಿಕೆ ಖಂಡಿಸಿ ಕರವೇ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿ ಎಂಇಎಸ್ ಹಾಗೂ ಶಿವಸೇನೆ ಪುಂಡರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
BIGG NEWS: ಹಿಮಾಚಲ ಪ್ರದೇಶ ಕಾಂಗ್ರೆಸ್ ಮಧ್ಯಾಹ್ನ ಶಾಸಕಾಂಗ ಪಕ್ಷದ ಸಭೆ; ಇಂದೇ ಮುಖ್ಯಮಂತ್ರಿ ನಿರ್ಧಾರ ಸಾಧ್ಯತೆ