ಶಿವಮೊಗ್ಗ: ನಗರದ ಬಸ್ ನಿಲ್ದಾಣದಲ್ಲೇ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೆ ಎಸ್ ಆರ್ ಟಿಸಿ ಕಂಡಕ್ಟರ್ ಕಂ ಡ್ರೈವರ್ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ.
ಶಿವಮೊಗ್ಗ ಸಾರಿಗೆ ಬಸ್ ನಿಲ್ದಾಣದಲ್ಲೇ ಹೊನ್ನಾಳಿ ಡಿಪೋದಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದಂತ ಬಸವರಾಜ್(38) ಎಂಬುವರು ವಿಷ ಸೇವಿಸಿ ಬಸ್ಸಲ್ಲೇ ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ.
ಬಸ್ಸಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಬಸವರಾಜ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿರೋಗಾಗಿ ತಿಳಿದು ಬಂದಿದೆ.
ಅಂದಹಾಗೇ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತೆ ಆತ್ಮಹತ್ಯೆಗೆ ಯತ್ನಿಸಿದಂತ ಬಸವರಾಜ್ 10 ವರ್ಷಗಳಿಂದ ಕೆಎಸ್ಆರ್ ಟಿಸಿಯಲ್ಲಿ ಕಂಡಕ್ಟರ್ ಕಂ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರ ವಿರುದ್ಧ ದಾಖಲಾಗಿದ್ದಂತ ಕೇಸ್ ಸಂಬಂಧ ವಿಚಾರಣೆಗೆ ಕರೆಸಿಕೊಂಡಿದ್ದಂತ ಹೊನ್ನಾಳಿ ಡಿಪೋದ ಅಧಿಕಾರಿಗಳು ಕಿರುಕುಳ ನೀಡಿದ್ದರು ಎನ್ನಲಾಗಿದೆ. ಈ ಹಿನ್ನಲೆಯಲ್ಲೇ ಬೇಸತ್ತು ಅವರು ಆತ್ಮಹತ್ಯೆಗೆ ಯತ್ನಿಸಿರೋದಾಗಿ ಹೇಳಲಾಗುತ್ತಿದೆ.
ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ನವೋದಯ ವಿದ್ಯಾಲಯದಲ್ಲಿ 1377 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ
‘ಸೋನುಗೌಡ’ ಕಾನೂನು ಬಾಹಿರವಾಗಿ ‘ಮಗು ದತ್ತು’ ಪ್ರಕರಣ: ಪೊರೀಸರಿಂದ ‘ಸ್ಥಳ ಮಹಜರು’