ಬೆಂಗಳೂರು : ಬೆಂಗಳೂರಿನಲ್ಲಿ ‘KSRTC’ ಬಸ್ ಗೆ ಮತ್ತೋರ್ವ ಬೈಕ್ ಸವಾರ ಬಲಿಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಬಿಎಂಪಿ ನೌಕರ ಶ್ರೀಧರ್ ಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸೇಂಟ್ ಮಾರ್ಥಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಮೈಸೂರು ಸರ್ಕಲ್ ಬಳಿ ಘಟನೆ ನಡೆದಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇನ್ನೂ, ಮೃತ ಶ್ರೀಧರ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
BIGG NEWS : ‘ರಾಜ್ಯದಲ್ಲಿ ಹೊಸದಾಗಿ 5 ಏರ್ಪೋರ್ಟ್ ಗಳ ನಿರ್ಮಾಣ’ : ಸಚಿವ ಮುರುಗೇಶ್ ನಿರಾಣಿ |Murugesh Nirani