ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದಂತ KSRTC ನೌಕರರ ಅರ್ಜಿಗಳನ್ನು ಪರಿಶೀಲಿಸಿದ ನಂತ್ರ, ಇಂದು ವರ್ಗಾವಣೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಗೆ ಆಕ್ಷೇಪಣೆಯನ್ನು ಸಲ್ಲಿಸೋದಕ್ಕೆ ಜುಲೈ.10ರವರೆಗೆ ಅವಕಾಶ ನೀಡಲಾಗಿದೆ.
ಈ ಕುರಿತಂತೆ KSRTC ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ.ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ಪರಸ್ಪರ 958 ನೌಕರರು ಅರ್ಜಿ ಸಲ್ಲಿಸಿದ್ದು, ಈ ಪೈಕಿ 616 ನೌಕರರು ಅವರ ಕೋರಿಕೆ ಮೇರೆಗೆ ಅಂತರ ನಿಗಮ ಪರಸ್ಪರ ವರ್ಗಾವಣೆಗೊಂಡಿರುತ್ತಾರೆ. ಸದರಿ ಪರಸ್ಪರ ವರ್ಗಾವಣೆ ಆದೇಶವನ್ನು ksrtc.karnataka.gov.in ವೆಬ್‌ಸೈಟ್‌ನಲ್ಲಿ ದಿನಾಂಕ:06.07.2024ರ ಇಂದು ಪ್ರಕಟಿಸಲಾಗಿದೆ ಎಂದು ತಿಳಿಸಿದೆ.
ಈ ವರ್ಗಾವಣೆ ಪಟ್ಟಿಗೆ, ದಿನಾಂಕ: 06.07.2024 ರಿಂದ ದಿನಾಂಕ: 10.07.2024 ರ ಸಂಜೆ 5.30 ರವರೆಗೆ ಲಿಖಿತ ಆಕ್ಷೇಪಣೆ ಸಲ್ಲಿಸಲು ನೌಕರರಿಗೆ ಅವಕಾಶವನ್ನು ನೀಡಲಾಗಿದೆ. ನೌಕರರು ಆಕ್ಷೇಪಣೆಗಳನ್ನು ಕಡ್ಡಾಯವಾಗಿ ಸಂಬಂಧಪಟ್ಟ ವಿಭಾಗದ ಆಡಳಿತಾಧಿಕಾರಿಗಳಿಗೆ ಸಲ್ಲಿಸಿ ಸ್ವೀಕೃತಿ ಪಡೆಯತಕ್ಕದ್ದು. ನೌಕರರು ವೈಯಕ್ತಿಕವಾಗಿ ಅಥವಾ ಅಂಚೆಯ ಮೂಲಕ ಕೇಂದ್ರ ಕಛೇರಿಗೆ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಅಂತ ಹೇಳಿದೆ.
ವರದಿ: ವಸಂತ ಬಿ ಈಶ್ವರಗೆರೆ
ಯಜಮಾನಿಯರ ಗಮನಕ್ಕೆ: ‘ಗೃಹ ಲಕ್ಷ್ಮೀ ಯೋಜನೆ’ಯ ಬಾಕಿ ಹಣ ಜಮೆ ಬಗ್ಗೆ ಬಿಗ್ ಅಪ್ ಡೇಟ್ | Gruhalakshmi Scheme
BREAKING: ರಾಜ್ಯ ಸರ್ಕಾರದಿಂದ ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳನ್ನು ನೇಮಿಸಿ ಆದೇಶ: ಇಲ್ಲಿದೆ ಪಟ್ಟಿ