Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಂಕಷ್ಟದ ಸಮಯದಲ್ಲಿ ಶ್ರೀಲಂಕಾಕ್ಕೆ ಭಾರತದ ನೆರವು: 38,000 ಮೆಟ್ರಿಕ್ ಟನ್ ಇಂಧನ ಪೂರೈಕೆ!

29/03/2026 9:54 PM
nitish kumar

ಬಿಹಾರ ರಾಜಕೀಯದಲ್ಲಿ ಸಂಚಲನ: ನಾಳೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

29/03/2026 9:12 PM

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರು ದಸರಾಗೆ KSRTCಯಿಂದ 2300ಕ್ಕೂ ಹೆಚ್ಚು ವಿಶೇಷ ಬಸ್ ಸೌಲಭ್ಯ: ಪ್ರವಾಸಿಗರಿಗೆ ಸ್ಪೆಷಲ್‌ ಪ್ಯಾಕೇಜ್ ಆರಂಭ
KARNATAKA

ಮೈಸೂರು ದಸರಾಗೆ KSRTCಯಿಂದ 2300ಕ್ಕೂ ಹೆಚ್ಚು ವಿಶೇಷ ಬಸ್ ಸೌಲಭ್ಯ: ಪ್ರವಾಸಿಗರಿಗೆ ಸ್ಪೆಷಲ್‌ ಪ್ಯಾಕೇಜ್ ಆರಂಭ

By kannadanewsnow0922/09/2025 6:03 AM

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ವೀಕ್ಷಣೆಗೆ ಹೊರಟಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿ ಸಿಯಿಂದ 2,300ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೇ ಪ್ರವಾಸಿಗರಿಗೆ ಸ್ಪೆಷಲ್ ಪ್ಯಾಕೇಜ್ ಕೂಡ ಕಲ್ಪಿಸಿದೆ.

ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ದಸರಾ-2025ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ(ವೇಗದೂತ), ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಈ ಕೆಳಕಂಡಂತೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದೆ.

ದಸರಾ ರಜೆಗಳ ಪ್ರಯುಕ್ತ ಕರಾರಸಾ ನಿಗಮದಿಂದ 2300ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ

• ದಸರಾ ಹಬ್ಬದ ರಜೆಗಳ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 26/09/2025, 27/09/2025 ಹಾಗೂ 30/09/2025 ರಂದು ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಗೆ 2300ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಸದರಿ ವಾಹನಗಳನ್ನು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಆಚರಣೆ ಮಾಡಲಾಗುವುದು. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ 02/10/2025 ಹಾಗೂ 05/10/2025 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು.

• ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೆöÊ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

ಮೈಸೂರು ದಸರಾ-2025 ಪ್ರಯುಕ್ತ ಕರಾರಸಾ ನಿಗಮದಿಂದ 610 ವಿಶೇಷ ಸಾರಿಗೆ ವ್ಯವಸ್ಥೆ/ವಿಶೇಷ ಪ್ಯಾಕೇಜ್ ಸಾರಿಗೆ ವ್ಯವಸ್ಥೆ

• ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್.ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 350 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 610 ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ.

• ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ “ಫ್ಲೈ ಬಸ್” (Fly Bus) ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿರುತ್ತದೆ.

• ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ಸಾರಿಗೆ ವಾಹನಗಳಿಂದ ಒಂದು ದಿನದ ವಿಶೇಷ ಪ್ರವಾಸ ಸಾರಿಗೆಗಳ ಕಾರ್ಯಾಚರಣೆ:

ಅ) ಗಿರಿದರ್ಶಿನಿ : ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ (ಪ್ರಯಾಣ ದರ ವಯಸ್ಕರಿಗೆ: ರೂ.450/- ಮತ್ತು ಮಕ್ಕಳಿಗೆ: ರೂ.300/-)

ಆ) ಜಲದರ್ಶಿನಿ : ಗೋಲ್ಡನ್ ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆ.ಆರ್.ಎಸ್. (ಪ್ರಯಾಣ ದರ ವಯಸ್ಕರಿಗೆ: ರೂ.500/- ಮತ್ತು ಮಕ್ಕಳಿಗೆ: ರೂ.350/-)

ಇ) ದೇವದರ್ಶಿನಿ : ನಂಜನಗೂಡು, ಬ್ಲಫ್, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ (ಪ್ರಯಾಣ ದರ ವಯಸ್ಕರಿಗೆ: ರೂ.330/-ಮತ್ತು ಮಕ್ಕಳಿಗೆ: ರೂ.225/-)

ಈ ಪ್ಯಾಕೇಜ್‌ಗಳನ್ನು ದಿನಾಂಕ27/09/2025 ರಿಂದ 07/10/2025 ಅವಧಿಯಲ್ಲಿ ಕಾರ್ಯಾಚರಿಸಲಾಗುವುದು.

ಈ ಮೇಲ್ಕಂಡ ಪ್ಯಾಕೇಜ್ ಸಾರಿಗೆಗಳು ಬೆಳಿಗ್ಗೆ ಮೈಸೂರಿನಿಂದ ಹೊರಟು ಮೇಲ್ಕಂಡ ವಿವಿಧ ಸ್ಥಳಗಳನ್ನು ಸಂದರ್ಶಿಸಿದ ನಂತರ ಸಾಯಂಕಾಲ ಮೈಸೂರಿಗೆ ವಾಪಸ್ಸಾಗುತ್ತವೆ.

• ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಅಥವಾ ಮೊಬೈಲ್ ಮುಖಾಂತರ ಮಾಡಬಹುದಾಗಿದೆ.

• ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ಕರಾರಸಾ ನಿಗಮದ ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು “ಮಾಹಿತಿ ಕೇಂದ್ರ” ವನ್ನು ಪ್ರತ್ಯೇಕವಾಗಿ ತೆರೆಯಲಾಗುವುದು.

• ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ನೆರೆರಾಜ್ಯಗಳಾದ ಆಂಧ್ರ‍್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟç ಹಾಗೂ ಪುದುಚೇರಿ ರಾಜ್ಯಗಳಲ್ಲಿರುವ ಗಣಕೀಕೃತ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳ ಮೂಲಕ ನಿಗಮದ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

• ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದ್ದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

• ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

• ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡವಾಗಿ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

• ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.

Share. Facebook Twitter LinkedIn WhatsApp Email

Related Posts

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM2 Mins Read

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM1 Min Read

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM1 Min Read
Recent News

ಸಂಕಷ್ಟದ ಸಮಯದಲ್ಲಿ ಶ್ರೀಲಂಕಾಕ್ಕೆ ಭಾರತದ ನೆರವು: 38,000 ಮೆಟ್ರಿಕ್ ಟನ್ ಇಂಧನ ಪೂರೈಕೆ!

29/03/2026 9:54 PM
nitish kumar

ಬಿಹಾರ ರಾಜಕೀಯದಲ್ಲಿ ಸಂಚಲನ: ನಾಳೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

29/03/2026 9:12 PM

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM
State News
KARNATAKA

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

By kannadanewsnow0929/03/2026 8:35 PM KARNATAKA 2 Mins Read

ಚಿಕ್ಕಮಗಳೂರು: “ಕಡಿಮೆ ಹೂಡಿಕೆ, ಅಲ್ಪ ಅವಧಿಯಲ್ಲಿ ಕೋಟಿ ಕೋಟಿ ಲಾಭ” – ಇಂತಹ ಆಕರ್ಷಕ ಜಾಹೀರಾತುಗಳು ಅಥವಾ ವಾಟ್ಸಾಪ್ ಸಂದೇಶಗಳು…

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM

ಸಾಗರದಲ್ಲಿ ಕೌಟುಂಬಿಕ ಕಲಹಕ್ಕೆ ಮನನೊಂದು ಸ್ಟಾಫ್ ನರ್ಸ್ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ

29/03/2026 8:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.