Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » KSRTCಯ ‘ಪಾರದರ್ಶಕ ನೇಮಕಾತಿ’ಗೆ ಪ್ರತಿಷ್ಠಿತ ರಾಷ್ಟ್ರೀಯ ‘ಸ್ಕಾಚ್’ ಪ್ರಶಸ್ತಿ ಗರಿ!
KARNATAKA

KSRTCಯ ‘ಪಾರದರ್ಶಕ ನೇಮಕಾತಿ’ಗೆ ಪ್ರತಿಷ್ಠಿತ ರಾಷ್ಟ್ರೀಯ ‘ಸ್ಕಾಚ್’ ಪ್ರಶಸ್ತಿ ಗರಿ!

By kannadanewsnow09

ನವದೆಹಲಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ಆಡಳಿತಾತ್ಮಕ ಸುಧಾರಣೆ ಮತ್ತು ತಂತ್ರಜ್ಞಾನ ಆಧಾರಿತ ಪಾರದರ್ಶಕ ನೇಮಕಾತಿ ಪ್ರಕ್ರಿಯೆಗಾಗಿ ಪ್ರತಿಷ್ಠಿತ ‘ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026’ (SKOCH National Award-2026) ಅನ್ನು ಮುಡಿಗೇರಿಸಿಕೊಂಡಿದೆ.

ಶನಿವಾರ (ಮಾರ್ಚ್ 28) ದೆಹಲಿಯ ಇಂಡಿಯಾ ಹ್ಯಾಬಿಟೇಟ್ ಸೆಂಟರ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಯಿತು.

ಪ್ರಶಸ್ತಿಗೆ ಕಾರಣವಾದ ಪ್ರಮುಖ ಅಂಶಗಳು:

ನಿಗಮವು ಜಾರಿಗೆ ತಂದಿರುವ “ಪಾರದರ್ಶಕ ನೇಮಕಾತಿ ಮತ್ತು ಪರಿಣಾಮಕಾರಿ ತರಬೇತಿ ಕಾರ್ಯಕ್ರಮ” ಈ ಪ್ರಶಸ್ತಿಗೆ ಆಯ್ಕೆಯಾಗಲು ಪ್ರಮುಖ ಕಾರಣವಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಮಾನವ ಹಸ್ತಕ್ಷೇಪವನ್ನು ಸಂಪೂರ್ಣವಾಗಿ ತಪ್ಪಿಸಿ, ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಿದ್ದನ್ನು ಸ್ಕಾಚ್ ಸಂಸ್ಥೆ ಶ್ಲಾಘಿಸಿದೆ.

  • ತಂತ್ರಜ್ಞಾನ ಆಧಾರಿತ ವ್ಯವಸ್ಥೆ: ಅರ್ಜಿ ಸಲ್ಲಿಕೆಯಿಂದ ಹಿಡಿದು ಘಟಕಗಳ ನಿಯೋಜನೆಯವರೆಗೆ ಸಂಪೂರ್ಣ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸಲಾಗಿದೆ.

  • ಪಾರದರ್ಶಕ ಪರೀಕ್ಷೆಗಳು: ಸ್ವಯಂಚಾಲಿತ ಚಾಲನಾ ಪರೀಕ್ಷೆ, ಆನ್‌ಲೈನ್ ಪರೀಕ್ಷೆಗಳು, ದಾಖಲೆಗಳ ಡಿಜಿಟಲ್ ಪರಿಶೀಲನೆ, ವೆಬ್ ಕ್ಯಾಸ್ಟಿಂಗ್ ಮತ್ತು ಅಟೋ ಜನರೇಟೆಡ್ ಅಂಕಪಟ್ಟಿ ನೀಡುವ ಮೂಲಕ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ.

  • ನೇಮಕಾತಿ ಸಾಧನೆ: ಈ ವ್ಯವಸ್ಥೆಯ ಮೂಲಕ 2,000 ಚಾಲಕ/ನಿರ್ವಾಹಕರು, 300 ತಾಂತ್ರಿಕ ಸಿಬ್ಬಂದಿ ಹಾಗೂ 441 ಜನರನ್ನು ಅನುಕಂಪದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ.

  • ಸಿಬ್ಬಂದಿ ತರಬೇತಿ: ಕಳೆದ ಆರು ತಿಂಗಳಲ್ಲಿ ಸುಮಾರು 12,000ಕ್ಕೂ ಹೆಚ್ಚು ಸಿಬ್ಬಂದಿಗೆ ಪರಿಣಾಮಕಾರಿ ತರಬೇತಿ ನೀಡುವ ಮೂಲಕ ನಿಗಮದ ಕಾರ್ಯಕ್ಷಮತೆಯನ್ನು ಹೆಚ್ಚಿಸಲಾಗಿದೆ.

ಪ್ರಶಸ್ತಿ ಪ್ರದಾನ:

ದೆಹಲಿಯ ಸಿಲ್ವರ್ ಓಕ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಅಕ್ರಂ ಪಾಷ (IAS) ಅವರು ಸ್ಕಾಚ್ ಫೌಂಡೇಶನ್ ಅಧ್ಯಕ್ಷ ಸಮೀರ್ ಕೊಚ್ಚರ್ ಮತ್ತು ಉಪಾಧ್ಯಕ್ಷ ಡಾ. ಗುರುಚರಣ್ ಧನ್ಜಾಲ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.

ಸ್ಕಾಚ್ ಸಂಸ್ಥೆಯ ಹಿನ್ನೆಲೆ:

1997ರಲ್ಲಿ ಸ್ಥಾಪನೆಯಾದ ದೆಹಲಿ ಮೂಲದ ‘ಸ್ಕಾಚ್’ ಸಂಸ್ಥೆಯು ಒಂದು ಸ್ವತಂತ್ರ ವಿಚಾರ ತಜ್ಞ ವೇದಿಕೆಯಾಗಿದೆ. 2003ರಿಂದ ದೇಶದ ವಿವಿಧ ಸಂಸ್ಥೆಗಳು ಉತ್ತಮ ಆಡಳಿತ, ಆರ್ಥಿಕ ನಿರ್ವಹಣೆ, ತಾಂತ್ರಿಕತೆ ಅಳವಡಿಕೆ ಮತ್ತು ಪಾರದರ್ಶಕ ನೀತಿಗಳ ಮೂಲಕ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದೆ.

ರಾಷ್ಟ್ರೀಯ ಮಟ್ಟದ ಈ ಪ್ರಶಸ್ತಿಯು ಕೆಎಸ್‌ಆರ್‌ಟಿಸಿಯ ಆಡಳಿತ ವೈಖರಿಗೆ ಸಿಕ್ಕ ದೊಡ್ಡ ಮನ್ನಣೆಯಾಗಿದ್ದು, ಇಡೀ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ.

ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌

ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಕರೆದ ಪ್ರೊಫೆಸರ್ : ವಿಡಿಯೋ ವೈರಲ್ | WATCH VIDEO

Share. Facebook Twitter LinkedIn WhatsApp Email

Related Posts

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

2 Mins Read

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

1 Min Read

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

1 Min Read
Recent News

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

TVK Vijay Sworn: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ಮೇ.13ಕ್ಕೆ ವಿಶ್ವಾಸಮತಯಾಚನೆ

State News
KARNATAKA

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

By kannadanewsnow09 KARNATAKA 2 Mins Read

ಮೈಸೂರು: ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ತನ್ನ 2025–26ನೇ ಸಾಲಿನ ’70ನೇ ರೈಲ್ವೆ ಸಪ್ತಾಹ’ವನ್ನು ಶನಿವಾರ (ಮೇ 9, 2026)…

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಸರ್ಕಾರ ರಚನೆ: ರಾಜ್ಯಪಾಲರ ಕ್ರಮಕ್ಕೆ ಕೆಪಿಸಿಸಿ ಸ್ವಾಗತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.