ಬೆಂಗಳೂರು: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮವು ಸತತ ಲಾಭದಲ್ಲಿದ್ದು 2023-24ನೇ ಆರ್ಥಿಕ ವರ್ಷದಲ್ಲಿ ಒಟ್ಟು ರೂ.121.97 ಕೋಟಿ ವಹಿವಾಟು ನಡೆಸಿದ್ದು ರೂ.56.11 ಕೋಟಿ ನಿವ್ವಳ ಲಾಭಗಳಿಸಿದೆ.
ನಿವ್ವಳ ಲಾಭದ ಮೇಲೆ ಡಿವಿಡೆಂಡ್ ರೂ.16.77 ಕೋಟಿ ಮತ್ತು ವಿಶೇಷ ಲಾಭಾಂಶ ರೂ.76.64 ಕೋಟಿ ಒಟ್ಟು ರೂ.93.41 ಕೋಟಿ ಚೆಕ್‍ಗಳನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ನವರಿಗೆ ಸಣ್ಣ ಕೈಗಾರಿಕಾ ಸಚಿವರಾದ ಶರಣ ಬಸಪ್ಪ ದರ್ಶನಾಪುರ, ನಿಗಮದ ಅಧ್ಯಕ್ಷರಾದ ಟಿ.ರಘುಮೂರ್ತಿ, ಚಳ್ಳಕೆರೆ ವಿಧಾನಸಭೆ ಸದಸ್ಯರು, ಬಸವರಾಜ ರಾಯರೆಡ್ಡಿ, ಮುಖ್ಯ ಮಂತ್ರಿಗಳ ಆರ್ಥಿಕ ಸಲಹೆಗಾರರು, ಸರ್ಕಾರದ ಕಾರ್ಯದರ್ಶಿಗಳಾದ ರಮಣ್ ದೀಪ್ ಚೌದರಿ, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ರವರುಗಳು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.