ಬೆಂಗಳೂರು : ಎಚ್ ಡಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಯಾವುದೇ ರೀತಿಯಾಗಿ ಆತಂಕ ಪಡುವ ಅಗತ್ಯವಿಲ್ಲ ಅವರಿಗೆ ತಂದೆ ತಾಯಿಯ ಆಶೀರ್ವಾದವಿದೆ ಎಂದು ಬೆಂಗಳೂರಿನಲ್ಲಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸದ ಒತ್ತಡದಿಂದ ವಿಶ್ರಾಂತಿ ಪಡೆದುಕೊಳ್ಳಲು ಅವರಿಗೆ ಆಗಲಿಲ್ಲ. ಆ ರೀತಿ ಆದಂಗ ಪಡುವ ಯಾವುದೇ ವಾತಾವರಣ ಇಲ್ಲ. ಕುಮಾರಣ್ಣ ಅವರು ಆರೋಗ್ಯವಾಗಿದ್ದಾರೆ. ಕುಮಾರಣ್ಣನ ಮೇಲೆ ತಂದೆ ತಾಯಿ ಆಶೀರ್ವಾದ ಇದೆ. ಕುಮಾರಣ್ಣಗೆ ಏನು ಆಗಿಲ್ಲ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದರು.
ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಸಭೆ ನಡೆಯಿತು. ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಹೋರಾಟದ ಬಗ್ಗೆ ನಡೆದಂತ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕೂಡ ಭಾಗಿಯಾಗಿದ್ದರು.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಲು ಹೆಚ್.ಡಿ ಕುಮಾರಸ್ವಾಮಿ ಪ್ರಾರಂಭಿಸಿದಾಗ ಅವರ ಮುಗಿನಲ್ಲಿ ರಕ್ತ ಸೋರುವುದಕ್ಕೆ ಶರುವಾಯ್ತು. ಕೂಡಲೇ ಸುದ್ದಿಗೋಷ್ಠಿಯನ್ನು ಮೊಟಕುಗೊಳಿಸಿ, ಅವರ ಪುತ್ರ ನಿಖಿಲ್ ಹಾಗೂ ಆಪ್ತರೊಂದಿಗೆ ತಕ್ಷಣ ಆಸ್ಪತ್ರೆಗೆ ತೆರಳಿದರು. ಇದೀಗ ನಿಖಿಲ್ ಕುಮಾರಸ್ವಾಮಿ ಎಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯದ ಕುರಿತು ಸ್ಪಷ್ಟನೆ ನೀಡಿದ್ದಾರೆ.