Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ ‘ಹಣ ವರ್ಗಾವಣೆ’ ತಕ್ಷಣ ಆಗಲ್ಲ; ದೊಡ್ಡ ಮೊತ್ತದ ಪಾವತಿಗೆ ಹೊಸ ‘ಬ್ರೇಕ್’ ಹಾಕಿದ RBI

20/04/2026 4:20 AM

ಬ್ಯಾಂಕ್ FD ಮರೆತುಬಿಡಿ; ಪೋಸ್ಟ್ ಆಫೀಸ್‌ನ ಈ 5 ಸ್ಕೀಮ್‌ಗಳಲ್ಲಿ ಹಣ ಇಟ್ಟರೆ ಸಿಗುತ್ತೆ ಬಂಪರ್ ಲಾಭ!

20/04/2026 4:10 AM

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿಕೆಶಿ ತಿರುಗೇಟು
KARNATAKA

ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿಕೆಶಿ ತಿರುಗೇಟು

By kannadanewsnow0914/05/2024 3:38 PM

ಬೆಂಗಳೂರು : “ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

ಸದಾಶಿವನಗರ ನಿವಾಸದಲ್ಲಿ ಪೆನ್ ಡ್ರೈವ್ ವಿಚಾರದಲ್ಲಿ ಅಂದು ಮಹಾನಾಯಕ ಎಂದು ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಎಂದು ಹೇಳಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಅವರು “ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ” ಎಂದರು.

ನನ್ನ ಹಸ್ತಕ್ಷೇಪವಿದ್ದರೆ ಬೆಲೆ ತೆರಲು ಸಿದ್ಧ:

ಶಾಸಕರು, ಸಚಿವರಿಂದ ಮಾತನಾಡಿಸುತ್ತಿರುವವರು ಯಾರು ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರುನಿಮ್ಮ ಬಗ್ಗೆ ಹೇಳಿದ್ದಾರೆ ಎಂದಾಗ, “ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ಧೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ” ಎಂದರು.

ರೇವಣ್ಣ ಸ್ಥಿತಿ ನೋಡಿ ಬೇಸರವಾಗುತ್ತದೆ:

ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ರೇವಣ್ಣ ಅವರನ್ನು ಬಂಧಿಸಲಾಗಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ರೇವಣ್ಣ ಅವರ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ. ಅವರದು ದೊಡ್ಡ ಕುಟುಂಬ, ಈ ರೀತಿ ಆಗಬಾರದು ಎಂದು ಬಯಸುತ್ತೇನೆ. ಅವರು ನನಗೆ ಏನಾದಲೂ ಬಯಸಲಿ. ಆದರೆ ನಾನು ಮಾತ್ರ ಅವರಿಗೆ ಕೆಟ್ಟದ್ದು ಬಯಸುವುದಿಲ್ಲ. ನಾನು ಪ್ರಕೃತಿ ನಿಯಮ, ನ್ಯಾಯದ ಮೇಲೆ ನಂಬಿಕೆ ಇಟ್ಟವನು. ನಾನು ರಾಜಕೀಯ ಷಡ್ಯಂತ್ರಕ್ಕೆ ಗುರಿ ಆಗಿದ್ದವನೇ ಮತ್ತು ಅದರ ನೋವು ಅನುಭವಿಸಿದವನೇ. ಆ ವೇಳೆಯಲ್ಲಿ ನಾನು ಎಷ್ಟು ಗಟ್ಟಿಯಾಗಿ, ಧೈರ್ಯವಾಗಿ, ಆತ್ಮವಿಶ್ವಾಸದಿಂದ ಇದ್ದೆ ಎಂಬುದು ನನಗೆ ಮಾತ್ರ ಗೊತ್ತಿದೆ. ದೇವರು ನನಗೆ ಎಲ್ಲಾ ರೀತಿಯ ರಕ್ಷಣೆ ನೀಡಿದ್ದು, ನಾನು ಬೇರೆಯವರಿಗೆ ಕೆಟ್ಟದು ಬಯಸುವುದಿಲ್ಲ. ಆದರೆ ನನ್ನ ಬ್ರದರ್ ಕುಮಾರಣ್ಣನಿಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತೇನೆ” ಎಂದರು.

SIT ಹೆಸರಿನಲ್ಲಿ ನೊಂದ ಮಹಿಳೆಯರಿಗೆ ಬೇದರಿಸಿದ್ದು ಯಾರು.?: ಮಾಜಿ ಸಿಎಂ HDK ಪ್ರಶ್ನೆ

ಬಾಗಲಕೋಟೆ : ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗನ ಮಧ್ಯ ಗಲಾಟೆ : ಕೊಡಲಿಯಿಂದ ಮಗನ ಹತ್ಯೆಗೈದ ತಂದೆ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM1 Min Read

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM1 Min Read

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM2 Mins Read
Recent News

ಇನ್ಮುಂದೆ ‘ಹಣ ವರ್ಗಾವಣೆ’ ತಕ್ಷಣ ಆಗಲ್ಲ; ದೊಡ್ಡ ಮೊತ್ತದ ಪಾವತಿಗೆ ಹೊಸ ‘ಬ್ರೇಕ್’ ಹಾಕಿದ RBI

20/04/2026 4:20 AM

ಬ್ಯಾಂಕ್ FD ಮರೆತುಬಿಡಿ; ಪೋಸ್ಟ್ ಆಫೀಸ್‌ನ ಈ 5 ಸ್ಕೀಮ್‌ಗಳಲ್ಲಿ ಹಣ ಇಟ್ಟರೆ ಸಿಗುತ್ತೆ ಬಂಪರ್ ಲಾಭ!

20/04/2026 4:10 AM

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

19/04/2026 9:28 PM

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM
State News
KARNATAKA

ಶಿವಮೊಗ್ಗ: ನಾಳೆ ಸೊರಬದ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತಿ ದೇವಿಯ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಲೋಕಾರ್ಪಣೆ

By kannadanewsnow0919/04/2026 9:28 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ದೂಗೂರು ಗ್ರಾಮದಲ್ಲಿ ಶ್ರೀ ಪಾರ್ವತೀ ದೇವಿಯ ಪುನರ್ ಪ್ರಾಣಪ್ರತಿಷ್ಠಾಪನೆ, ದೇವಾಲಯ ಪ್ರವೇಶೋತ್ಸವ ಹಾಗೂ ಕಳಶಾರೋಹಣ…

BREAKING: ಮೈಸೂರಿನ ಕಾವೇರಿ ನದಿ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

19/04/2026 9:15 PM

ಶಿವಮೊಗ್ಗ: ಸಾಗರದ ಸಿರಿವಂತೆಯ ‘ಚಿತ್ರಸಿರಿ ಪ್ರಶಸ್ತಿ’ ಹೃದಯವಂತಿಕೆಯ ಪ್ರತೀಕ: ಬಿ.ಆರ್. ಜಯಂತ್

19/04/2026 9:08 PM

ಸಾಗರದ ಅದರಂತೆ ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾಪನೆ: ನಾಳೆ ನೂತನ ಆಲಯ ಲೋಕಾರ್ಪಣೆ

19/04/2026 8:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.