ಹಾಸನ: ಯಾರು ಏನೇ ಕುತಂತ್ರ ಮಾಡಿದರೂ, ಏನೇ ಹೋರಾಟ ಮಾಡಿದರೂ ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ಸರ್ಕಾರ ಬರೋದು ಖಚಿತ’ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಭವಿಷ್ಯ ನುಡಿದಿದ್ದಾರೆ.
ಅವರು ತಾಲೂಕಿನ ಕಟ್ಟಾಯದಲ್ಲಿ ಇಂದು ನಡೆದ ಜೆಡಿಎಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡುತ್ತ ಈ ಬಗ್ಗೆ ಹೇಳಿದರು,. ಇದೇ ವೇಳೆ ಅವರು ಮಾತನಾಡಿ, ಕಟ್ಟಾಯ ಹೋಬಳಿ ಒಂದರಲ್ಲೇ 15 ಸಾವಿರ ಲೀಡ್ ಕೊಟ್ಟ ಹಿನ್ನೆಲೆಯಲ್ಲಿ ಲೋಕಸಭೆಗೆ ಹೋಗಿ ಪ್ರಧಾನಿ ಆಗಿದ್ದನ್ನು ನಾನು ಎಂದಿಗೂ ಮರೆಯುವುದಿಲ್ಲ, ‘1991ರಲ್ಲಿ ಲೋಕಸಭೆಗೆ ನಿಂತಾಗ ಎಲ್ಲಾ ಕಡೆ ದೇವೇಗೌಡರು ಸೋಲುತ್ತಾರೆ ಎಂಬ ಮಾತುಗಳು ಬಂದಾಗ ಜಿಲ್ಲೆಯ ಜನರು ನನಗೆ 33 ಸಾವಿರ ಮತಗಳ ಲೀಡ್ ಕೊಟ್ಟು ಗೆಲ್ಲಿಸಿದ್ದು ನಾನು ಎಂದಿಗೂ ಮರೆಯುವುದಿಲ್ಲ ಅಂತ ಹೇಳಿದರು.