ಹಾಸನ : ಕುಮಾರಸ್ವಾಮಿ ನಮ್ಮ ನಾಯಕ. ಕುಮಾರಸ್ವಾಮಿಯೇ ನಮ್ಮ ಅಲ್ಟಿಮೇಟ್ ನಾಯಕ ಎಂದು ಹೆಚ್ ಡಿ ರೇವಣ್ಣ ಹೇಳಿದ್ದಾರೆ.
ದೇವೇಗೌಡರ ಕುಟುಂಬದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಟಿಕೆಟ್ ಹಂಚಿಕೆ ವಿಚಾರದಲ್ಲಿ ವರಿಷ್ಠರು ಕೈಗೊಳ್ಳುವ ನಿರ್ಧಾರವೇ ಅಂತಿಮ ರೇವಣ್ಣ ಹೊಡೆದಾಡುತ್ತಾರೆ ಕೆಲವರು ಅಂದುಕೊಂಡಿದ್ದರು. ನನ್ನ ತಲೆ ಇರುವವರೆಗೆ ಯಾವುದೇ ಕಾರಣಕ್ಕೂ ನಾವು ಹೊಡೆದಾಡಲ್ಲ ಎಂದಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ನಿರ್ಧಾರವೇ ಅಂತಿಮ. ನಾನಾಗಲಿ, ನನ್ನ ಮಕ್ಕಳಾಗಲಿ ಟಿಕೆಟ್ ಫೈನಲ್ ಮಾಡಲು ಆಗಲ್ಲ. ಕುಮಾರಸ್ವಾಮಿ ಹಾಗೂ ನನ್ನ ಸಂಬಂಧ ಬೇರ್ಪಡಿಸಲು ಸಾಧ್ಯವಿಲ್ಲ ಎಂದರು. ಕೆಲವರು ಭವಾನಿ ಅವರಿಗೆ ಟಿಕೆಟ್ ಕೊಡಿ ಅಂತಾರೆ, ಕೆಲವರು ಇನ್ನೊಬ್ಬರಿಗೆ ಕೊಡಿ ಅಂತಾರೆ. ಅದನ್ನೆಲ್ಲಾ ಕೂತು ತೀರ್ಮಾನ ಮಾಡುವುದು ಪಕ್ಷ ಎಂದು ಸ್ಪಷ್ಟನೆ ನೀಡಿದರು.
BIGG NEWS : ನಟ ಡಾ.ವಿಷ್ಣುವರ್ಧನ್ ಗೆ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡುವಂತೆ ಅಭಿಮಾನಿಗಳ ಆಗ್ರಹ