Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಭಯೋತ್ಪಾದಕರೇ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ
KARNATAKA

ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಭಯೋತ್ಪಾದಕರೇ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

By kannadanewsnow09

ಬೆಂಗಳೂರು : ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ಫೋನ್ ಟ್ಯಾಪ್ ಬಗ್ಗೆ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಮಾಧ್ಯಮದವರು ಕುಮಾರಪಾರ್ಕ್ ಸರಕಾರಿ ಅತಿಥಿ ಗೃಹದ ಬಳಿ ಗಮನ ಸೆಳೆದಾಗ ಅವರು ಸೋಮವಾರ ಉತ್ತರಿಸಿದ್ದಿಷ್ಟು:

ಭಯೋತ್ಪಾದಕರ ಫೋನನ್ನು ಅನುಮತಿ ಪಡೆದು ಟ್ಯಾಪ್ ಮಾಡಲಾಗುತ್ತದೆ. ಇವರು ನಮ್ಮ ರಾಜ್ಯದ ನಾಯಕರು, ಇವರ ಫೋನ್ ಟ್ಯಾಪ್ ಮಾಡುವ ಅವಶ್ಯಕತೆ ನಮ್ಮ ಸರ್ಕಾರಕ್ಕಿಲ್ಲ. ಕೇವಲ ಪ್ರಚಾರಕ್ಕಾಗಿ ಇಂತಹ ಸುಳ್ಳು ಆರೋಪ ಮಾಡುತ್ತಿದ್ದಾರೆ.”

ಸರ್ಕಾರ ಒಂದು ವರ್ಷ ಐಸಿಯುನಲ್ಲಿ ಇತ್ತು ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ “ಪಾಪ ಅವರು ಇನ್ನೇನು ಮಾಡಲು, ಇನ್ನೇನು ಹೇಳಲು ಸಾಧ್ಯ. ಅಧಿಕಾರದಲ್ಲಿ ಇದ್ದಾಗ ಏನೂ ಮಾಡಲಿಲ್ಲ. ಸರ್ಕಾರ ಐಸಿಯುನಲ್ಲಿ ಇತ್ತೋ ಇರಲಿಲ್ಲವೋ ಎಂದು ಜನ ಹೇಳಬೇಕು, ನಾಯಕರುಗಳಲ್ಲ”.

ಈ ಹಿಂದಿನ ಸರ್ಕಾರದ ಕೆಟ್ಟ ಆಡಳಿತದಿಂದ, ಬೆಲೆ ಏರಿಕೆಯಿಂದ ತತ್ತರಿಸಿದ್ದ ಮಹಿಳೆಯರ ಜೀವನದಲ್ಲಿ ನಮ್ಮ ಸರ್ಕಾರದ ಆಡಳಿತದಿಂದ ಬದಲಾವಣೆ ಉಂಟಾಗಿದೆ. ಕೆಟ್ಟ ಆಡಳಿತ ಎಂದು ಚುನಾವಣೆಗೆ ಮುಂಚಿತವಾಗಿ ಕುಮಾರಸ್ವಾಮಿ ಹಾಗೂ ಅವರ ಪಕ್ಷದವರ ನುಡಿಮುತ್ತುಗಳ ಬಗ್ಗೆ ಮಾಧ್ಯಮದವರ ಬಳಿಯೇ ದಾಖಲೆಗಳು ಇದ್ದಾವಲ್ಲವೇ? ಅವರು ನಮ್ಮ ಬಗ್ಗೆ ಮಾತನಾಡಲೇ ಬೇಕಲ್ಲವೇ!. ಅವರಿಂದ ನಾನು ಶಹಬಾಷ್ಗಿರಿ ನಿರೀಕ್ಷಿಸಲು ಸಾಧ್ಯವೇ? ಇದನ್ನು ನಾನು ನಿರೀಕ್ಷೆ ಮಾಡುವುದೂ ಇಲ್ಲ”.

ನನಗೂ ಪೆನ್ ಡ್ರೈವ್ ಗೂ ಸಂಬಂಧವಿಲ್ಲ

ಪೆನ್ ಡ್ರೈವ್ ಪ್ರಕರಣದಲ್ಲಿ ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ ಅವರ ಪಾತ್ರದ ಬಗ್ಗೆ ಆರೋಪ ಮಾಡಿರುವ ಕುರಿತು ಕೇಳಿದಾಗ “ನನಗೂ ಈ ಪ್ರಕರಣಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ನನ್ನ ಹೆಸರನ್ನು ಪ್ರಸ್ತಾಪ ಮಾಡದಿದ್ದರೆ ಅವರಿಗೆಲ್ಲ ನಿದ್ದೆ ಬರುವುದಿಲ್ಲ. ಮಾಧ್ಯಮಗಳು ಸಹ ಈ ವಿಚಾರದಲ್ಲಿ ನೈತಿಕತೆಯ ಗಡಿ ಮೀರಬಾರದು. ಉಪ್ಪು ತಿಂದವನು ನೀರು ಕುಡಿಯಬೇಕು ಎಂದು ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಕಾನೂನು ತನ್ನ ಕ್ರಮ ತೆಗೆದುಕೊಳ್ಳುತ್ತದೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ”.

ಯಾರ ಜೊತೆಯೂ ಮಾತನಾಡಿಲ್ಲ

ಡಿ.ಕೆ.ಶಿವಕುಮಾರ್, ದೇವರಾಜೇಗೌಡ ಮತ್ತು ಶಿವರಾಮೇಗೌಡ ಅವರ ನಡುವಿನ ಸಂಭಾಷಣೆ ಆಡಿಯೋ ಬಿಡುಗಡೆ ಬಗ್ಗೆ ಕೇಳಿದಾಗ “ನಾನು ಯಾರ ಜೊತೆಯೂ ಮಾತನಾಡಬಾರದ್ದು ಮಾತನಾಡಿಲ್ಲ. ಯಾರಿಗೂ ನಾನು ಜಿಪಿಎ ಕೊಟ್ಟಿಲ್ಲ. ನಾನೊಬ್ಬ ರಾಜಕಾರಣಿ, ನನ್ನನ್ನು ಭೇಟಿ ಮಾಡಲು ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲ ಪಕ್ಷದ ಕಾರ್ಯಕರ್ತರೂ ಬರುತ್ತಾರೆ. ಅವರು ಬಿಜೆಪಿಯವರು, ನನ್ನ ಭೇಟಿಗೆ ಸಮಯ ಕೇಳಿದ್ದರು. ನಾನು ಕೊಡಲಿಲ್ಲ. ಅರ್ಧ ನಿಮಿಷವೂ ನಾನು ಯಾರ ಬಳಿಯೂ ಮಾತನಾಡಿಲ್ಲ. ನನಗೂ ರಾಜಕೀಯ, ವ್ಯವಹಾರ ಪ್ರಜ್ಞೆ ಇದೆ. ಈ ವಿಚಾರದ ಗಂಭೀರತೆಯೂ ನನಗೆ ಅರ್ಥವಾಗುತ್ತದೆ.

ಡಿ.ಕೆ.ಶಿವಕುಮಾರ್ ಜೈಲಿಗೆ ಹೋದಾಗ ನಾನು ಅವರ ತಾಯಿಯನ್ನು ಸಾಂತ್ವನ ಮಾಡಿದ್ದೆ, ಆದರೆ ಅವರು ನನ್ನ ತಂದೆಗೆ ನೋವು ನೀಡುವುದು ಸರಿಯೇ ಎಂದು ಕುಮಾರಸ್ವಾಮಿ ಹೇಳಿರುವ ಬಗ್ಗೆ ಕೇಳಿದಾಗ, “ನನಗೆ ಅವರ ಪರಿಸ್ಥಿತಿ ಬಗ್ಗೆ ಅನುಕಂಪವಿದೆ. ನಾನು ಈ ವಿಚಾರದಲ್ಲಿ ಯಾರ ಬಗ್ಗೆಯೂ ಅಂದೂ ಮಾತನಾಡಿಲ್ಲ, ಇಂದೂ ಮಾತನಾಡುವುದಿಲ್ಲ” ಎಂದರು.

ಸರ್ಕಾರಕ್ಕೆ ಒಂದು ವರ್ಷ: ತೃಪ್ತಿದಾಯಕ ಆಡಳಿತ ನೀಡಿದ್ದೇವೆ

ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿರುವ ಬಗ್ಗೆ ಕೇಳಿದಾಗ “ಎಲ್ಲರ ಸಹಕಾರದಿಂದ ರಾಜ್ಯದ ಜನರಿಗೆ ತೃಪ್ತಿದಾಯಕ ಆಡಳಿತ ನೀಡಿದ್ದೇವೆ. ಗ್ಯಾರಂಟಿ ಯೋಜನೆಗಳ ಜತೆಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಜನರಿಗೆ ನಮ್ಮ ಸರ್ಕಾರದ ಬಗ್ಗೆ ತೃಪ್ತಿಯಿದೆ. ಜನರ ವಿಶ್ವಾಸವನ್ನು ಗಳಿಸಿ ಒಂದು ವರ್ಷ ಪೂರೈಸಿದ್ದೇವೆ ಎಂದರು.

ಲೋಕಸಭೆ ಚುನಾವಣೆ ಬಂದ ಕಾರಣಕ್ಕೆ ಒಂದಷ್ಟು ಅಭಿವೃದ್ಧಿ ಕೆಲಸಗಳು ಬಾಕಿ ಉಳಿದಿದ್ದವು. ಇವು ಕಾರ್ಯಗತಗೊಳ್ಳಬೇಕು, ಟೆಂಡರ್ ಗಳನ್ನು ಕರೆಯಲು ಸಜ್ಜಾಗಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರಕ್ಕೆ ಅವಕಾಶ ಕೊಟ್ಟಿರುವ ರಾಜ್ಯದ ಜನತೆಗೆ, ನಮಗೆ ಸಹಕಾರ ನೀಡಿರುವ ಅಧಿಕಾರಿಗಳಿಗೆ, ಮಾಧ್ಯಮಗಳಿಗೆ ಹೃದಯ ಪೂರ್ವಕ ವಂದನೆಗಳು.

ವಿರೋಧ ಪಕ್ಷಗಳು ನಮ್ಮ ಬಗ್ಗೆ ಟೀಕೆಗಳನ್ನು ಮಾಡುತ್ತವೆ, ಅವುಗಳನ್ನು ಸ್ವೀಕರಿಸಿ ಮುನ್ನಡೆಯಬೇಕು. ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದ ಮೊದಲನೇ ದಿನದಿಂದಲೇ ಟೀಕೆ ಪ್ರಾರಂಭ ಮಾಡಿದರು. ಅತ್ತೆ ಸೊಸೆಗೆ ಜಗಳ ತಂದಿಟ್ಟರು, ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರೂ ಸುಮ್ಮನೆ ಇರುವುದಿಲ್ಲ ಎಂದು ಹೇಳಿದರು‌. ಈ ಟೀಕೆಗಳಿಗೆಲ್ಲಾ ನಾವು ಉತ್ತರ ಕೊಟ್ಟಿದ್ದೇವೆ. ಜನರೂ ಉತ್ತರ ಕೊಡುತ್ತಾರೆ ಎನ್ನುವ ಆತ್ಮವಿಶ್ವಾಸ ನನಗಿದೆ” ಎಂದು ಹೇಳಿದರು.

‘ಮೊದಲು ಇಂಡಿಯಾ ಮೈತ್ರಿ ಮುರಿದು ಬಿದ್ದಿತು, ನಂತ್ರ ಕುಸಿಯಿತು ಮತ್ತು ಈಗ ಸಂಪೂರ್ಣವಾಗಿ ಸೋತಿದೆ’ : ಪ್ರಧಾನಿ ಮೋದಿ

ರಾಜ್ಯದಲ್ಲಿ ಕಳೆದ 5 ತಿಂಗಳಲ್ಲಿ 26 ಜನ, 25 ಆನೆಗಳ ಸಾವು! : ಅರಣ್ಯ ಇಲಾಖೆಯಿಂದ ಅಂಕಿ ಅಂಶ ಬಿಡುಗಡೆ

Share. Facebook Twitter LinkedIn WhatsApp Email

Related Posts

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

2 Mins Read

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

1 Min Read

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

1 Min Read
Recent News

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

TVK Vijay Sworn: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ಮೇ.13ಕ್ಕೆ ವಿಶ್ವಾಸಮತಯಾಚನೆ

State News
KARNATAKA

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

By kannadanewsnow09 KARNATAKA 2 Mins Read

ಮೈಸೂರು: ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ತನ್ನ 2025–26ನೇ ಸಾಲಿನ ’70ನೇ ರೈಲ್ವೆ ಸಪ್ತಾಹ’ವನ್ನು ಶನಿವಾರ (ಮೇ 9, 2026)…

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಸರ್ಕಾರ ರಚನೆ: ರಾಜ್ಯಪಾಲರ ಕ್ರಮಕ್ಕೆ ಕೆಪಿಸಿಸಿ ಸ್ವಾಗತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.