ಬೆಂಗಳೂರು: ಜೆಪಿ ನಗರದಲ್ಲಿರುವಂತ ಸಂಸದೆ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ. ಇಂದಿನ ಸುಮಲತಾ-ಹೆಚ್ ಡಿಕೆ ಭೇಟಿ ತೀವ್ರ ಕುತೂಹಲ ಮೂಡಿಸಿದೆ.
ನಿನ್ನೆಯಷ್ಟೇ ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಆಗಮಿಸಿದಂತ ಬೆಂಬಲಿಗರೊಂದಿಗೆ ಸಭೆ ನಡೆಸಿ, ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಚರ್ಚೆ ನಡೆಸಿದ್ದರು. ಅಂತಿಮವಾಗಿ ಏಪ್ರಿಲ್.3ರಂದು ಮಂಡ್ಯದಲ್ಲಿ ಸಭೆ ನಡೆಸಿ, ತನ್ನ ಮುಂದಿನ ನಿರ್ಧಾರ ಪ್ರಕಟಿಸೋದಾಗಿ ಘೋಷಿಸಿದ್ದರು.
ಈ ಬೆನ್ನಲ್ಲೇ ಇಂದು ಬೆಂಗಳೂರಿನ ಜೆಪಿ ನಗರದಲ್ಲಿರುವಂತ ಸಂಸದೆ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ ಮಂಡ್ಯ ಕ್ಷೇತ್ರದ ಜೆಡಿಎಸ್-ಬಿಜೆಪಿ ಬೆಂಬಲಿತ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.
ಸಂಸದೆ ಸುಮಲತಾ ಅಂಬರೀಶ್ ಹಾಗೂ ಹೆಚ್.ಡಿ ಕುಮಾರಸ್ವಾಮಿ ಭೇಟಿ, ತೀವ್ರ ಕುತೂಹಲ ಕೆರಳಿಸಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಹೆಚ್.ಡಿಕೆ ಮನವಿ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.
ಇಡಿ, ಸಿಬಿಐ, ತೆರಿಗೆ ಇಲಾಖೆ ಎಲ್ಲವೂ ಪ್ರಧಾನಿ ಗುಲಾಮರಾಗಿ ಕೆಲಸ ಮಾಡುತ್ತಿವೆ: ಮುಖ್ಯಮಂತ್ರಿ ಚಂದ್ರು
ತಾಂಡಾಗಳನ್ನು `ಕಂದಾಯ ಗ್ರಾಮ’ಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ : ಸಚಿವ ಪ್ರಿಯಾಂಕ್ ಖರ್ಗೆ